ತುಮಕೂರು: ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಫೆಬ್ರವರಿ 28ರಂದು ಬೆಳಿಗ್ಗೆ 10:30 ಗಂಟೆಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನಗರದ ಜಿಲ್ಲಾ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ತರಬೇತಿ ಕಾರ್ಯಕ್ರಮ ನಡೆಯಲಿದ್ದು, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಂದರ್ಭದಲ್ಲಿ 2017 ಅಕ್ಟೋಬರ್ 31ರ ಪೂರ್ವದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಮಂಜೂರಾದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ, ವಿದ್ಯಾರ್ಹತೆ ಹೊಂದಿಲ್ಲದ/ಹೊಂದಿರುವ ಹಾಗೂ ಅನುಕಂಪದ ಆಧಾರದ ಮೇಲೆ ನೇಮಕಗೊಂಡು, ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆಯಾಗದೇ ಸೇವೆ ಸಲ್ಲಿಸುತ್ತಿರುವ ಸುಮಾರು 766 ಸಿಬ್ಬಂದಿಗಳಿಗೆ ಅನುಮೋದನಾ ಪತ್ರ ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತಿ ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4