ತುಮಕೂರು: ಜಿಲ್ಲೆಯ ಸಿರಾ ತಾಲ್ಲೂಕಿನಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ವತಿಯಿಂದ ಹಮ್ಮಿಕೊಂಡಿದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ನ್ಯಾಯ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಗಳ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾನ್ಯ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಕೆ.ಟಿ. ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಸಿರಾ ತಾಲ್ಲೂಕಿನ ಇಓ, ಬಿಇಓ, 42 ಗ್ರಾಮ ಪಂಚಾಯ್ತಿಗಳ ಪಿಡಿಓಗಳು, CRP / BRP ಗಳು ಅಂಗನವಾಡಿ ಮೇಲ್ವಿಚಾರಕಿಯರು ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಸಾ.ಚಿ ರಾಜ್ ಕುಮಾರ್ ರವರು ಹಾಗೂ ಮಕ್ಕಳ ರಕ್ಷಣಾಧಿಕಾರಿ ಶಿವಣ್ಣನವರು ಭಾಗಿಯಾಗಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q