ತುಮಕೂರು: ಕರ್ನಾಟಕ ತಾಂಡ ಅಭಿವೃದ್ಧಿ ನಿಗಮವು ಸಮಾಜ ಕಲ್ಯಾಣ ಇಲಾಖೆ ಹಾಗೂ ಬೆಂಗಳೂರಿನ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಸಹಯೋಗದಲ್ಲಿ ತಾಂಡಾಗಳ ನಿರುದ್ಯೋಗಿ ಬಂಜಾರ ಸಮುದಾಯದ ಯುವಕ/ಯುವತಿಯರಿಗಾಗಿ ಬಂಜಾರ ಸಂಸ್ಕೃತಿ, ಸಂವಿಧಾನ ಹಾಗೂ ವೃತ್ತಿ ತರಬೇತಿ ಕುರಿತು ಅರಿವು ಮೂಡಿಸಲು ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ತರಬೇತಿ ಪಡೆಯಲಿಚ್ಛಿಸುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪಿಯುಸಿ/ ಯಾವುದೇ ಪದವಿ, ಸ್ನಾತಕೋತ್ತರ ಪದವಿ ಹಾಗೂ ಉನ್ನತ ವಿದ್ಯಾಭ್ಯಾಸ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಯು 2 ದಿನಗಳ ಕಾಲ ನಡೆಯಲಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ, ವಸತಿ ಹಾಗೂ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು. ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ನಿಗಮದ ಜಾಲತಾಣ https://banjarathanda.karnataka.gov ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ತುಮಕೂರು ವಲಯ, ಸರಸ್ವತಿ ಪುರಂ, 2ನೇ ಹಂತ, ತುಮಕೂರು-572102 ಅಥವಾ ದೂ.ವಾ.ಸಂ.0816-2956063 ಅಥವಾ ಇ-ಮೇಲ್: tumkurktdcl@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx