ರಾಯಚೂರು: ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ನ್ಯಾಯ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಗಳ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಉದ್ಘಾಟನೆ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೆಂಕಟೇಶ್, ಸದಸ್ಯರು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಸದಸ್ಯ ಕಾರ್ಯದರ್ಶಿಗಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಉಪ ನಿರ್ದೇಶಕರು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ದತ್ತು ಮಾಸಾಚರಣೆ ಕುರಿತು ಪೋಸ್ಟರ್ ಬಿಡುಗಡೆ ಮತ್ತು ಪ್ರತಿಜ್ಞಾ ವಿಧಿಯನ್ನು ಬೋದಿಸಲಾಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q