nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೀಪಾವಳಿಯಲ್ಲಿ ಪಟಾಕಿ ಸಿಡಿಸುವಾಗ ಎಚ್ಚರ! ಈ ಮುನ್ನೆಚ್ಚರಿಕೆಗಳನ್ನು ಮರೆಯದಿರಿ

    November 6, 2026

    ರಾವಣನಾಗಿ ಯಶ್ ಪರಕಾಯ ಪ್ರವೇಶ! ರಾವಣ ಪಾತ್ರ ಮಾಡಿದರೆ ಶಾಂತಿ ಹೋಮ ಮಾಡಿಸಬೇಕಾ?

    November 6, 2026

    ನವೆಂಬರ್ ಸಂಬಳದಲ್ಲಿ ಸರ್ಕಾರಿ ನೌಕರರಿಗೆ ಡಬಲ್ ಖುಷಿ; ತುಟ್ಟಿಭತ್ಯೆ ಹೆಚ್ಚಳದ ಆದೇಶ ಪ್ರಕಟ

    November 6, 2026
    Facebook Twitter Instagram
    ಟ್ರೆಂಡಿಂಗ್
    • ದೀಪಾವಳಿಯಲ್ಲಿ ಪಟಾಕಿ ಸಿಡಿಸುವಾಗ ಎಚ್ಚರ! ಈ ಮುನ್ನೆಚ್ಚರಿಕೆಗಳನ್ನು ಮರೆಯದಿರಿ
    • ರಾವಣನಾಗಿ ಯಶ್ ಪರಕಾಯ ಪ್ರವೇಶ! ರಾವಣ ಪಾತ್ರ ಮಾಡಿದರೆ ಶಾಂತಿ ಹೋಮ ಮಾಡಿಸಬೇಕಾ?
    • ನವೆಂಬರ್ ಸಂಬಳದಲ್ಲಿ ಸರ್ಕಾರಿ ನೌಕರರಿಗೆ ಡಬಲ್ ಖುಷಿ; ತುಟ್ಟಿಭತ್ಯೆ ಹೆಚ್ಚಳದ ಆದೇಶ ಪ್ರಕಟ
    • ಕರ್ನಾಟಕದಲ್ಲಿ ಹಲವು ಐಎಫ್‌ ಎಸ್‌ ಅಧಿಕಾರಿಗಳ ವರ್ಗಾವಣೆ; ಯಾರಿಗೆ ಯಾವ ಹುದ್ದೆ?
    • ಅರಣ್ಯ ಇಲಾಖೆಯ ಮುಂದೆಯೇ ಮರಗಳ ಮಾರಣಹೋಮ
    • ನಾವು ಗೊರಕೆ ಹೊಡೆಯುವ ಶಬ್ದ ನಮಗೇ ಏಕೆ ಕೇಳಿಸುವುದಿಲ್ಲ? ಇದರ ಹಿಂದಿದೆ ಮೆದುಳಿನ ವಿಚಿತ್ರ ಆಟ!
    • ಎಫ್‌ ಡಿ ಹೂಡಿಕೆದಾರರ ಗಮನಕ್ಕೆ: ನವೆಂಬರ್‌ ನಲ್ಲಿ ಬಡ್ಡಿದರ ಬದಲಾವಣೆ, ಯಾವ ಬ್ಯಾಂಕ್‌ ನಲ್ಲಿ ಹೆಚ್ಚು ಲಾಭ?
    • ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ಉಚಿತ ತರಬೇತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕದಲ್ಲಿ ಹಲವು ಐಎಫ್‌ ಎಸ್‌ ಅಧಿಕಾರಿಗಳ ವರ್ಗಾವಣೆ; ಯಾರಿಗೆ ಯಾವ ಹುದ್ದೆ?
    ರಾಜ್ಯ ಸುದ್ದಿ November 6, 2026

    ಕರ್ನಾಟಕದಲ್ಲಿ ಹಲವು ಐಎಫ್‌ ಎಸ್‌ ಅಧಿಕಾರಿಗಳ ವರ್ಗಾವಣೆ; ಯಾರಿಗೆ ಯಾವ ಹುದ್ದೆ?

    By Ganesh TumkuruNovember 6, 2026No Comments1 Min Read
    vidhana saudha

    ಕರ್ನಾಟಕ ಸರ್ಕಾರವು ಅರಣ್ಯ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ಮಾಡಿದ್ದು, ಹಲವು ಐಎಫ್‌ಎಸ್‌ (ಭಾರತೀಯ ಅರಣ್ಯ ಸೇವೆ) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವಿವಿಧ ಜಿಲ್ಲೆಗಳ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳಿಗೆ ಹೊಸ ಜವಾಬ್ದಾರಿ ವಹಿಸಲಾಗಿದೆ.ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಪ್ರಸನ್ನ ಕೃಷ್ಣ ಪಟಗಾರ ಅವರನ್ನು ಮಡಿಕೇರಿಯ ಸಂಶೋಧನಾ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

    ನಾಗರಹೊಳೆ ರಾಷ್ಟ್ರೀಯ ಉದ್ಯಾನದ ನಿರ್ದೇಶಕರಾಗಿದ್ದ ಪಿ.ಎ. ಸೀಮಾ ಅವರನ್ನು ತುಮಕೂರು ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಿಸಲಾಗಿದೆ. ಬಿಳಿಗಿರಿರಂಗನಬೆಟ್ಟ ಹುಲಿ ಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಹಾಗೂ ಸದ್ಯ ಹುದ್ದೆ ನಿರೀಕ್ಷೆಯಲ್ಲಿದ್ದ ಬಿ.ಎಸ್. ಶ್ರೀಪತಿ ಅವರಿಗೆ ಚಿಕ್ಕಮಗಳೂರು ಕಾರ್ಯಯೋಜನೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆ ನೀಡಲಾಗಿದೆ.

    ಹುದ್ದೆ ನಿರೀಕ್ಷೆಯಲ್ಲಿದ್ದ ಎನ್. ರಮೇಶ್ ಬಾಬು ಅವರನ್ನು ಬೆಂಗಳೂರಿನ ಬಜೆಟ್ ಮತ್ತು ಆಡಿಟ್ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಸೌರಭ್ ಕುಮಾರ್ ಅವರನ್ನು ನಾಗರಹೊಳೆ ಹುಲಿ ಯೋಜನೆಯ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

    ಚಿತ್ರದುರ್ಗ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಕೆ. ಹರೀಶ್ ಅವರನ್ನು ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಿಸಲಾಗಿದೆ. ಶಿವಮೊಗ್ಗದ ಕೆಎಫ್‌ಡಿಸಿ ವಿಭಾಗೀಯ ವ್ಯವಸ್ಥಾಪಕರಾಗಿದ್ದ ಎನ್.ಎಸ್. ರಾಘವೇಂದ್ರ ರಾವ್ ಅವರಿಗೆ ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜವಾಬ್ದಾರಿ ನೀಡಲಾಗಿದೆ.

    ಮಡಿಕೇರಿ ವಿಚಕ್ಷಣಾ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಕೆ.ಪಿ. ಗೋಪಾಲ್ ಅವರನ್ನು ಮಡಿಕೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಿಸಲಾಗಿದೆ. ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ ನ ತುಂಗಭದ್ರಾ ಕಾಡಾ ಉಪ ಆಡಳಿತಾಧಿಕಾರಿಯಾಗಿದ್ದ ಎಂ.ಸಿ. ಭಾಗ್ಯಲಕ್ಷ್ಮಿ ಅವರನ್ನು ಶಿವಮೊಗ್ಗದ ಕೆಎಫ್‌ ಡಿಸಿ ಪ್ರಾದೇಶಿಕ ವ್ಯವಸ್ಥಾಪಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ದೀಪಾವಳಿಯಲ್ಲಿ ಪಟಾಕಿ ಸಿಡಿಸುವಾಗ ಎಚ್ಚರ! ಈ ಮುನ್ನೆಚ್ಚರಿಕೆಗಳನ್ನು ಮರೆಯದಿರಿ

    November 6, 2026

    ನವೆಂಬರ್ ಸಂಬಳದಲ್ಲಿ ಸರ್ಕಾರಿ ನೌಕರರಿಗೆ ಡಬಲ್ ಖುಷಿ; ತುಟ್ಟಿಭತ್ಯೆ ಹೆಚ್ಚಳದ ಆದೇಶ ಪ್ರಕಟ

    November 6, 2026

    ವಾಹನ ಸವಾರರಿಗೆ ಗುಡ್‌ ನ್ಯೂಸ್‌! ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50 ರಿಯಾಯಿತಿ: ಯಾವಾಗ?

    November 3, 2026

    Leave A Reply Cancel Reply

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೀಪಾವಳಿಯಲ್ಲಿ ಪಟಾಕಿ ಸಿಡಿಸುವಾಗ ಎಚ್ಚರ! ಈ ಮುನ್ನೆಚ್ಚರಿಕೆಗಳನ್ನು ಮರೆಯದಿರಿ

    November 6, 2026

    ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ಸಂಭ್ರಮದ ಸಿದ್ಧತೆಗಳು ಆರಂಭವಾಗಿವೆ. ಮನೆಮನೆಗಳಲ್ಲಿ ದೀಪಗಳನ್ನು ಬೆಳಗಿಸಿ, ಸಿಹಿ ಹಂಚಿಕೊಂಡು, ಪಟಾಕಿಗಳನ್ನು ಸಿಡಿಸುವ ಮೂಲಕ ಹಬ್ಬವನ್ನು…

    ರಾವಣನಾಗಿ ಯಶ್ ಪರಕಾಯ ಪ್ರವೇಶ! ರಾವಣ ಪಾತ್ರ ಮಾಡಿದರೆ ಶಾಂತಿ ಹೋಮ ಮಾಡಿಸಬೇಕಾ?

    November 6, 2026

    ನವೆಂಬರ್ ಸಂಬಳದಲ್ಲಿ ಸರ್ಕಾರಿ ನೌಕರರಿಗೆ ಡಬಲ್ ಖುಷಿ; ತುಟ್ಟಿಭತ್ಯೆ ಹೆಚ್ಚಳದ ಆದೇಶ ಪ್ರಕಟ

    November 6, 2026

    ಕರ್ನಾಟಕದಲ್ಲಿ ಹಲವು ಐಎಫ್‌ ಎಸ್‌ ಅಧಿಕಾರಿಗಳ ವರ್ಗಾವಣೆ; ಯಾರಿಗೆ ಯಾವ ಹುದ್ದೆ?

    November 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.