ಬೆಂಗಳೂರಿನ ಲಗ್ಗರೆ ಬಳಿಯಿರುವ ಆಸರೆ ವೃದ್ಧಾಶ್ರಮ ಸಮೀಪದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಒಮ್ಮೆಲೆ ಟ್ರಾನ್ಸ್ ಫಾರ್ಮರ್ ಬ್ಲಾಸ್ಟ್ ಆಗಿದ್ದು ಪಕ್ಕದಲ್ಲಿದ್ದ ಗುಜರಿ ಅಂಗಡಿಗೆ ಬೆಂಕಿ ತಗುಲಿದೆ. ಮುಜಾಹಿಲ್ ಎಂಬುವವರಿಗೆ ಸೇರಿದ ಗುಜರಿ ಅಂಗಡಿ ಸುಟ್ಟು ಭಸ್ಮವಾಗಿದೆ.
ಊಟಕ್ಕೆ ಕೆಲಸಗಾರರು ಹೊರ ಹೋಗಿದ್ದ ಹಿನ್ನೆಲೆಯಲ್ಲಿ ಅವಘಡ ತಪ್ಪಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.


