ಹಾವೇರಿ: ಸಾರಿಗೆ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಹಾವೇರಿ ತಾಲೂಕಿನ ಮೇವುಂಡಿ ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ ಅದೃಷ್ಟವಶಾತ್ ಬಸ್ಸಿನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಿಂದ ರಾಣೇಬೆನ್ನೂರು ಕಡೆಗೆ ಹೊರಟಿತ್ತು. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4