ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಡಿಸೆಂಬರ್ 31 ರಿಂದ ಸಾರಿಗೆ ಮುಷ್ಕರಕ್ಕೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಡಿ.9ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಇದೇ ಸಂದರ್ಭದಲ್ಲಿ ಸಾರಿಗೆ ನೌಕರರು ಬೆಳಗಾವಿ ಚಲೋ ಮೂಲಕ ತಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಡಲಿದ್ದಾರೆ ಎನ್ನಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ನೋಟಿಸ್ ನೀಡಲಾಗುತ್ತದೆ. ಕೈಗಾರಿಕಾ ವಿವಾದ ಕಾಯಿದೆ ಸೆಕ್ಷನ್ 27ರ ಪ್ರಕಾರ ಮುಷ್ಕರಕ್ಕೂ ಮುನ್ನ 21 ದಿನಗಳ ಮೊದಲು ನೋಟಿಸ್ ನೀಡಬೇಕು. ಹಾಗಾಗಿ ಡಿಸೆಂಬರ್ 9ರಂದು ನೋಟಿಸ್ ನೀಡಲಾಗುತ್ತಿದೆ. ಬಳಿಕ ಡಿಸೆಂಬರ್ 31ರಿಂದ ಸಾರಿಗೆ ಮುಷ್ಕರ ಆರಂಭಿಸಲಾಗುತ್ತದೆ.
6 ಸಾರಿಗೆ ನೌಕರರ ಸಂಘಟನೆಗಳ ಒಕ್ಕೂಟ ಸೇರಿ ಜಂಟಿ ಕ್ರಿಯಾ ಸಮಿತಿ ಮಾಡಿಕೊಂಡಿದ್ದು, 6 ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಘೋಷಿಸಿವೆ. ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡಿದರೆ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳಲಿದೆ ಎಂದು ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296