ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತೀವ್ರ ಕಫಾ, ಕೆಮ್ಮಿನಿಂದ ಬಳಲುತ್ತಿರುವ ಹೆಚ್ ಡಿಕೆ, ತುಮಕೂರು ರಸ್ತೆಯಲ್ಲಿರುವ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ 3–4 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.ಸದ್ಯ ಸ್ವಲ್ಪ ಆರೋಗ್ಯ ಸುಧಾರಣೆ ಆಗಿದೆ ಎಂಬ ಮಾಹಿತಿ ಲಭಿಸಿದೆ.
ಇತ್ತೀಚೆಗೆ ಚೆನ್ನೈನ ಅಪೋಲೋ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು. ಆದರೂ ಕಫಾ, ಕೆಮ್ಮು ಕಡಿಮೆಯಾಗದ ಹಿನ್ನೆಲೆ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅನಾರೋಗ್ಯದ ಕಾರಣ ನಾಳೆ ದೆಹಲಿಗೆ ತೆರಳಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4