ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಜಸ್ಟ್ ಅರ್ಧಗಂಟೆ ಸುರಿದ ಮಳೆ ಬೆಂಗಳೂರನ್ನೇ ಅಲ್ಲಾಡಿಸಿದೆ. ಒಂದು ಕಡೆ ಅಂಡರ್ ಪಾಸ್ ಗಳು ಜಲಾವೃತಗೊಂಡರೆ, ಮತ್ತೊಂದೆಡೆ 25ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ. ವಾಹನ ಸವಾರರು ಪರದಾಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಅರ್ಧಗಂಟೆ ಬಂದ ಮಳೆಗೆ ನಗರದಲ್ಲಿ 25ಕ್ಕೂ ಹೆಚ್ಚು ಭಾಗದಲ್ಲಿ ಮರಗಳು ಧರೆಗೆ ಉರುಳಿವೆ ಎಂದು ತಿಳಿದುಬಂದಿದೆ. ದೂರು ಬಂದ ನಗರಗಳಲ್ಲಿ ಮರಗಳನ್ನು ಬಿಬಿಎಂಪಿ ಸಿಬ್ಬಂದಿಗಳು ತೆರೆವುಗೊಳಿಸಿದ್ದಾರೆ ಎಂದು ಬಿಬಿಎಂಪಿ ಕಂಟ್ರೋಲ್ ರೂಮ್ ಇಂದ ಮಾಹಿತಿ ನೀಡಲಾಗಿದೆ. ನಗರದ ಜಯನಗರ, ಬಸವನಗುಡಿ, ಮಲ್ಲೆಶ್ವರಂ, ಕೋರಮಂಗಲ, ಬಿಟಿಎಂ ಲೇಔಟ್, ಯಶವಂತರಪುರ ಸೇರದಿಂತೆ ಹಲವೆಡೆ ಮರಗಳು ಧರೆಗೆ ಉರುಳಿವೆ.
ಆನೇಕಲ್ ತಾಲೂಕಿನ ಬನಹಳ್ಳಿಯಲ್ಲಿ 10 ಕ್ಕೂ ಹೆಚ್ಚು ಮನೆಗಳ ಶೀಟ್ ಗಳು ಹಾರಿ ಹೋಗಿದ್ದು, ಸಿಮೆಂಟ್ ಬ್ರಿಕ್ಸ್ ಗಳು ಕೂಡಾ ನೆಲಕ್ಕುರುಳಿವೆ. ಆನೇಕಲ್ ಭಾಗದಲ್ಲೂ ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಮಳೆ ಆಗಿದೆ. ಸೂರ್ಯಸಿಟಿಯಲ್ಲಿ ಆಸ್ಪತ್ರೆಯ ಶೀಟ್ ಗಳೇ ಹಾರಿ ಹೋಗಿವೆ. ಪಾರ್ಕಿಂಗ್ ನಲ್ಲಿದ್ದ ಕಾರುಗಳು ಜಖಂಗೊಂಡಿವೆ.
ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವ್ ಆಗಿದ್ದಾರೆ. ಇನ್ನು ಹೆಣ್ಣೂರು ಮುಖ್ಯರಸ್ತೆಯ ಲಿಂಗರಾಜ ಪುರಂ ಬಳಿ ಚಲಿಸುತ್ತಿದ್ದ ಕಾರ್ ಮೇಲೆ ಮರ ಉರುಳಿಬಿದ್ದಿತ್ತು. ಅದೃಷ್ಟವಶಾತ್ ಕಾರ್‌ನಲ್ಲಿದ್ದವರು ಬಚಾವ್ ಆಗಿದ್ದಾರೆ. ಪಾಲಿಕೆ ಸಿಬ್ಬಂದಿ ಹಾಗೂ ಟ್ರಾಫಿಕ್ ಪೊಲೀಸರು ಮರ ತೆರವುಗೊಳಿಸೋ ಕೆಲಸ ಮಾಡಿದರು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296