ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜೈಲಿನಲ್ಲಿದ್ದಾರೆ ಈ ನಡುವೆ ನಟ ದರ್ಶನ್ ಖೈದಿ ನಂಬರ್ 6106 ಎಂಬುದು ಎಲ್ಲರಿಗೂ ಗೊತ್ತಾಗಿದ್ದು, ಈ ಸಂಖ್ಯೆ ಈಗ ಟ್ರೆಂಡ್ ಆಗುತ್ತಿದೆ.
ಇದೀಗ, 6106 ಸ್ಟಿಕ್ಕರ್ ಗೆ ಫುಲ್ ಡಿಮ್ಯಾಂಡ್ ಹೆಚ್ಚಾಗಿದ್ದು, ಬೆಂಗಳೂರು, ರಾಯಚೂರು, ಮಂಡ್ಯ ಮತ್ತಿತರ ಜಿಲ್ಲೆಗಳಲ್ಲಿ ಮೊಬೈಲ್ ಅಂಗಡಿಗಳ ಮುಂದೆ ಜನರು ಕ್ಯೂ ನಿಂತಿದ್ದಾರೆ. ತಮ್ಮ ಮೊಬೈಲ್ ಕವರ್ ನಲ್ಲಿ ಕೈದಿ ನಂಬರ್ ಅನ್ನು ಸ್ಟಿಕ್ಕರ್ ಮಾಡಿ ಅಂಟಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಗಾಡಿಗಳ ಮೇಲು ಕೈದಿ ನಂ.6106 ಎಂದು ಅಂಟಿಸಿಕೊಳ್ಳುತ್ತಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ.
ಇದೇ ವೇಳೆ ಪರಪ್ಪನ ಅಗ್ರಹಾರದ ಜೈಲಿನಿಂದಲೇ ನಟ ದರ್ಶನ್ ಅವರು ತಮ್ಮ ಅಭಿಮಾನಿಗಳಿಗೆ ಜೈಲು ಅಧಿಕಾರಿಗಳ ಮೂಲಕ ಮನವಿ ಮಾಡಿಕೊಂಡಿದ್ದಾರೆ.
‘ಅಭಿಮಾನಿಗಳು ಯಾರೂ ಜೈಲಿನ ಬಳಿ ಬರಬೇಡಿ. ಜೈಲಿನ ನಿಯಮಗಳ ಪ್ರಕಾರ ಅಭಿಮಾನಿಗಳ ಭೇಟಿ ಅಸಾಧ್ಯ. ಜೈಲಿನ ಬಳಿ ನನ್ನ ಭೇಟಿಗೆ ಬಂದು ನೀವು ಕಾಯುವುದು, ನನ್ನ ಭೇಟಿಗೆ ಅವಕಾಶ ಸಿಗದೆ ನಿರಾಸೆಯಿಂದ ವಾಪಸ್ ಹೋಗುವುದು ಇವೆಲ್ಲ ಆಗುವುದು ಬೇಡ ಎಂದಿದ್ದಾರೆ.
ಆದ್ರಲ್ಲು ನಿನ್ನೆ ವಿಶೇಷ ಚೇತನ ಯುವತಿ ಸೌಮ್ಯ ಭೇಟಿಗೆ ಆಗಮಿಸಿದ್ದ ಬಗ್ಗೆ, ಭೇಟಿಯಾದಲು ಅಸಾಧ್ಯವಾದ ಬಗ್ಗೆ ಬೇಸರವಾಗಿದೆ’ ಎಂದು ನಟ ದರ್ಶನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ಮೂರು ದಿನಗಳ ಹಿಂದೆ ಸೂರ್ಯಕಾಂತ್ ಎಂಬ ವಿಶೇಷ ಚೇತನ ಕೂಡ ಆಗಮಿಸಿದ್ದರು. ದೂರದ ಗುಲ್ಬರ್ಗಾದಿಂದ ತ್ರಿ–ವೀಲರ್ ಬೈಕ್ ನಲ್ಲಿ ಆಗಮಿಸಿದ್ದರು ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


