ಪಾವಗಡ: ಪಟ್ಟಣದ ಬಾಪೂಜಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ 28 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತ ಹೊಂದಿದ ಮುದ್ದಯ್ಯ ಅವರಿಗೆ ಬೀಳ್ಕೊಡುಗೆ ಸಮಾರಂಭ ಶನಿವಾರ ಹಮ್ಮಿಕೊಳ್ಳಲಾಗಿತ್ತು
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನನ್ನ ವೃತ್ತಿ ಜೀವನದಲ್ಲಿ ಸಹಕರಿಸಿದಂತಹ ಪ್ರತಿಯೊಬ್ಬರಿಗೂ ಋಣಿಯಾಗಿರುತ್ತೇನೆ, ಅದೇ ರೀತಿ ಪಾಶ್ಚಿಮಾತ್ಯ ಸಂಸ್ಕೃತಿಗಳನ್ನ ಅಳವಡಿಸಿಕೊಳ್ಳದೆ, ಭಾರತೀಯ ಪರಂಪರೆಯ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಹೋಗಲು ಕರೆ ನೀಡಿದರು
ಮಾಜಿ ಶಾಸಕ ಹಾಗೂ ಬಾಪೂಜಿ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಉಗ್ರ ನರಸಿಂಹಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಬಾಪೂಜಿ ಕಾಲೇಜನ್ನ ಬೆಳೆಸುವುದರಲ್ಲಿ ಮುದ್ದಯ್ಯ ಅವರ ಕಾರ್ಯ ಶ್ಲಾಘನೀಯವಾದದ್ದು. ಸಂಸ್ಥೆಯಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನ ನೀಡುತ್ತಾ ಬಂದಿದ್ದು, ಮುಂದೆಯೂ ಶಿಕ್ಷಣ ಪರ್ವ ಮುಂದುವರೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ, ನಿವೃತ್ತ ಪ್ರಾಂಶುಪಾಲರಾದ ಬಸವಲಿಂಗಪ್ಪ, ತುಮಕೂರಿನ ಬಾಪೂಜಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೃಷ್ಣ ಮೂರ್ತಿ, ವಾಲ್ಮೀಕಿ ಜಾಗೃತಿ ವೇದಿಕೆಯ ಅಧ್ಯಕ್ಷ ಪಾಳೇಗಾರ ಲೋಕೇಶ್, ಶಿವಣ್ಣ, ಸೇರಿದಂತೆ ಬಾಪೂಜಿ ವಿದ್ಯಾ ಸಂಸ್ಥೆಯ ಸಿಬ್ಬಂದಿ ಹಾಗೂ ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx