nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಗಲಿದ ವಾರ್ತಾಧಿಕಾರಿ ಎಂ.ಆರ್. ಮಮತಾರವರಿಗೆ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ
    ತುಮಕೂರು August 5, 2024

    ಅಗಲಿದ ವಾರ್ತಾಧಿಕಾರಿ ಎಂ.ಆರ್. ಮಮತಾರವರಿಗೆ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ

    By adminAugust 5, 2024No Comments2 Mins Read
    mamatha

    ತುಮಕೂರು: ಶುಕ್ರವಾರವಷ್ಟೇ ನಿಧನರಾದ ತುಮಕೂರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್. ಮಮತಾರವರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ ಕಾರ್ಯಕ್ರಮವನ್ನುಆಯೋಜಿಸಲಾಗಿತ್ತು.

    ಮೆದುಳು ರಕ್ತಸ್ರಾವದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ಶುಕ್ರವಾರ ನಿಧನರಾಗಿದ್ದರು. ಮೃತರ ಗೌರವಾರ್ಥವಾಗಿ ನಗರದ ಪತ್ರಿಕಾಭವನದಲ್ಲಿ ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮವನ್ನುಆಯೋಜಿಸಲಾಗಿದ್ದು, ನೆರೆದಿದ್ದ ಪತ್ರಕರ್ತರು ಮಮತಾರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಂತಾಪ ವ್ಯಕ್ತಪಡಿಸಿದರು.


    Provided by
    Provided by

    ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಮಮತಾರವರು ಅತ್ಯಂತ ಸ್ನೇಹ ಪೂರ್ವಕವಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಪ್ರತಿಯೊಬ್ಬರೊಂದಿಗೆ ಪ್ರೀತಿಯಿಂದ ಹಾಗೂ ಆತ್ಮೀಯತೆಯರಾಗಿ ವರ್ತಿಸುತ್ತಾ ತಮ್ಮ ಕೆಲಸ ನಿರ್ವಹಿಸುತ್ತಿದ್ದರು. ಅವರು ಇತ್ತೀಚೆಗೆ ತಮ್ಮಅನಾರೋಗ್ಯದ ಬಗ್ಗೆ ಪತ್ರಕರ್ತ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದರು.

    ಆದರೆ ಇಷ್ಟು ಬೇಗ ಸಾವು ಅವರನ್ನು ಅಪ್ಪಿಕೊಳ್ಳತ್ತದೆ ಎಂಬುದನ್ನು ಊಹಿಸಿರಲಿಲ್ಲ. ಈ ಹಿಂದಿನ ಹಿರಿಯ ಸಹಾಯಕ ನಿರ್ದೇಶಕರಾದ ಮಂಜುನಾಥ್ ರವರೂ ಸಹ ಅಕಾಲಿಕ ಮರಣಕ್ಕೆ ತುತ್ತಾಗಿದ್ದು, ವಾರ್ತಾ ಇಲಾಖೆಗೆ ಗ್ರಹಣ ಹಿಡಿದಂತಾಗಿದೆ ಎಂದು ನುಡಿದರು.

    ಈ ವೇಳೆ ಸಂತಾಪ ಸೂಚಿಸಿ ಮಾತನಾಡಿದ ಹಿರಿಯ ಪತ್ರಕರ್ತರಾದ ಎಸ್.ನಾಗಣ್ಣ ಅವರು ವಾರ್ತಾ ಇಲಾಖೆ ಅಧಿಕಾರಿಗಳು ಜಿಲ್ಲಾಡಳಿತ ಮಾಧ್ಯಮದ ನಡುವಿನ ಸಂಪರ್ಕಕೊಂಡಿ. ಇತ್ತೀಚೆಗೆ ಸರ್ಕಾರಿ ಅಧಿಕಾರಿಗಳು ಅತ್ಯಂತ ಹೆಚ್ಚಿನಒತ್ತಡದಲ್ಲಿಕಾರ್ಯನಿರ್ವಹಿಸುತ್ತಿದ್ದು, ಅಗತ್ಯ ಸಿಬ್ಬಂದಿ ಕೊರತೆಯು ಇದಕ್ಕೆ ಕಾರಣವಾಗಿದೆ. . ಪರಿಸ್ಥಿತಿಯನ್ನು ಅರ್ಥೈಸಿಕೊಂಡು ಮಾಧ್ಯಮದವರು ಸಲಹೆ ರೂಪದಲ್ಲಿ ಅಧಿಕಾರಿಗಳೊಡನೆ ಸಂವಹನ ಸಾಧಿಸಬೇಕು ಎಂದು ತಿಳಿಸಿ, ಮಮತಾ ಹಾಗೂ ಮಂಜುನಾಥ್ ಈ ಇಬ್ಬರು ಅಧಿಕಾರಿಗಳ ನಿಧನ ತುಂಬಲಾರದ ನಷ್ಟ ಎಂದರು.

    ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರಾದ ಮೋಹನ್ ಕುಮಾರ್ ಅವರು ಮಮತಾರವರು ಚುರುಕಿನಿಂದ ಕಾರ್ಯನಿರ್ವಹಿಸುತ್ತಿದ್ದರು, ಆದರೆ ಅವರ ಅನಾರೋಗ್ಯ ಅವರನ್ನು ಕರ್ತವ್ಯ ನಿರ್ವಹಿಸಲು ಅನುಮತಿಸುತ್ತಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.

    ಶ್ರದ್ಧಾಂಜಲಿ ಅರ್ಪಿಸಿದ ಕಲಾಶ್ರೀ ಡಾ.ಲಕ್ಷ್ಮಣ್‌ದಾಸ್ ಮೃತರಗುಣಗಾನ ಮಾಡಿ ಅವರ ಆತ್ಮಕ್ಕೆ ಸದ್ಗತಿದೊರೆಯಲಿ ಎಂದು ತಿಳಿಸಿದರು.

    ಸಭೆಯಲ್ಲಿ ಗೃಹಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ನಾಗಣ್ಣಅವರು ಮಾತನಾಡಿ, ಸರ್ಕಾರ ಮತ್ತು ಮಾಧ್ಯಮಗಳ ನಡುವಿನ ಸಂವಹನಕಾರರಾಗಿದ್ದ ಮಮತಾ ಅವರ ನಿಧನ ತುಂಬಲಾರದ ನಷ್ಟ ಎಂದು ಸಂತಾಪ ಸೂಚಿಸಿದರು.

    ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ನುಡಿನಮನ ಸಲ್ಲಿಸಿ ಮಾತನಾಡಿ, ಜಿಲ್ಲಾಡಳಿತದ ಹಲವು ಸಭೆಗಳಲ್ಲಿ ಅವರೊಂದಿಗೆ ಭಾಗಿಯಾಗಿದ್ದೆ. ಸಭೆಗಳಲ್ಲಿ ಮೌನಿಯಾಗಿದ್ದರೂ ಕರಾರುವಕ್ಕಾಗಿ ಸುದ್ದಿಗಳನ್ನು ಮಾಧ್ಯಮ ಮಿತ್ರರಿಗೆ ತಲುಪಿಸುತ್ತಿದ್ದರು. ಸಂದಭ೯ದಲ್ಲಿ ಒತ್ತಡದಲ್ಲಿ ಇರುತ್ತಿದ್ದುದನ್ನು ಗಮನಿಸಿದ್ದೆ. ವಿಧಿಯಾಟಕ್ಕೆ ಬಲಿಯಾಗಿದ್ದು ದುರಂತ ಎಂದು ಸ್ಮರಿಸಿದರು.

    ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಂ, ಹರೀಶ್‌ಆಚಾರ್ಯ, ನುಡಿನಮನ ಸಲ್ಲಿಸಿದರು. ರಾಷ್ಟ್ರೀಯ ಮಂಡಳಿ ಸದಸ್ಯ ಅನು ಶಾಂತರಾಜು, ನಿರ್ದೇಶಕರುಗಳಾದ ಜಯಣ್ಣ, ಶಂಕರ್, ಚಿಕ್ಕಣ್ಣ, ರೇಣುಕಾ ಪ್ರಸಾದ್ ಕಾಗ್ಗೆರೆ ಸುರೇಶ್, ಮಾಜಿ ನಿರ್ದೇಶಕ ಕೊಂತಿಹಳ್ಳಿ ರಂಗನಾಥ್ , ನರಸಿಂಹ, ಸುರೇಶ್, ವೀರಪ್ಪ, ರವಿ, ಕಸಾಪದಚಿಕ್ಕ ಬೆಳ್ಳಾವಿ ಶಿವಕುಮಾರ್, ಕನ್ನಡ ಸಂಸ್ಕೃತಿ ಇಲಾಖೆ ಯ ಸುರೇಶ್ ಸೇರಿದಂತೆ ಹಿರಿಯ, ಯುವ ಪತ್ರಕರ್ತರು ಉಪಸ್ಥಿತರಿದ್ದರು. ಎರಡು ನಿಮಿಷ ಮೌನ ಆಚರಿಸಿ ಸಂತಾಪ ಸೂಚಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.