ಯುಪಿಎಸ್ ಸಿ ಪರೀಕ್ಷೆಯಲ್ಲಿ 349ನೇ ಬ್ಯಾಂಕ್ ಪಡೆದಿರುವ ಶಿಲ್ಪಶ್ರೀ ಆರ್. ಅವರನ್ನು ಕರ್ನಾಟಕ ಭೋವಿ ಕ್ಷೇಮಾಭಿವೃದ್ಧಿ ಸಂಘದಿಂದ ಸನ್ಮಾನಿಸಲಾಯಿತು. ನಗರದ ಜನ್ಮಾದೇವಿ ಮಂದಿರ ಕಲ್ಯಾಣ ಮಂಟಪದಲ್ಲಿ ನಡೆದ ಸಂಘದ 23ನೇ ವಾರ್ಷಿಕೋತ್ಸವ ಮತ್ತು 44ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಯಿತು.
ಹೈಸ್ಕೂಲ್ ನಿಂದ ಉನ್ನತ ಶಿಕ್ಷಣದವರೆಗೆ ಉತ್ತಮ ಅಂಕ ಪಡೆದಿರುವ ಭೋವಿ ಸಮಾಜದ 442 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಮಹಾಗಣಪತಿ ಹೋಮ, ದುರ್ಗಾ ಹೋಮ, ಕುಂಭಾಭಿಷೇಕ ಮಹೋತ್ಸವ, ಗೋಪೂಜೆ, ಮಂಟಪ ಪ್ರವೇಶ, ಗಣೇಶ ಪೂಜೆಗಳು ನಡೆದವು. ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


