ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಯಶಸ್ವಿಯಾಗಿ ನಡೆದರೂ, ರಾಜಧಾನಿ ಬೆಂಗಳೂರಿನಲ್ಲೇ ಕಡಿಮೆ ಮತದಾನವಾಗಿರುವ ಹಿನ್ನೆಲೆ ಸಾರ್ವಜನಿಕರು ಬೆಂಗಳೂರಿನಲ್ಲಿ ಬ್ಯಾನರ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
“ಚುನಾವಣಾ ಆಯೋಗ ಅಷ್ಟೊಂದು ಪ್ರಚಾರ ಮಾಡಿದ ನಂತರವೂ ಮತದಾನದಿಂದ ದೂರ ಉಳಿದು ಬದುಕಿದ್ದರೂ ಸತ್ತಂತೆ ವರ್ತಿಸಿದ ಬೆಂಗಳೂರು ನಗರದ ಸುಶಿಕ್ಷಿತ ಸತ ಪ್ರಜೆಗಳಿಗೆ ನಮ್ಮ ಶ್ರದ್ಧಾಂಜಲಿಗಳು” ಎಂದು ಬ್ಯಾನರ್ ನಲ್ಲಿ ಬರೆಯಲಾಗಿದೆ.
ಮತದಾನ ಮಾಡುವ ಹಕ್ಕಿದ್ದರೂ ಮತ ಹಾಕಿಲ್ಲ. ಇವರು ಬದುಕಿದ್ದು ಸತ್ತಂತೆ ಎಂದು ಬ್ಯಾನರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಪ್ರತಿಬಾರಿಯಂತೆ ಈ ಬಾರಿಯೂ ರಾಜಧಾನಿ ಬೆಂಗಳೂರಿನ ಮತದಾರರಲ್ಲಿ ನಿರುತ್ಸಾಹ ಮುಂದುವರೆದಿದ್ದು, ಮತದಾನ ಪ್ರಮಾಣ ನಿರೀಕ್ಷೆಯಂತೆ ಕಡಿಮೆ ಪ್ರಮಾಣದಲ್ಲಾಗಿದೆ. ಬೇರೆ ಕಡೆಗಳಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲೂ ಜನರು ಉತ್ಸಾಹದಿಂದ ಮತಚಲಾಯಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA