ತುಮಕೂರು: ಜಿಲ್ಲಾಡಳಿತದ ವತಿಯಿಂದ ಮೊದಲ ಬಾರಿಗೆ ಆಚರಿಸಲಾದ ತುಮಕೂರು ದಸರಾ ಉತ್ಸವದ ಜಂಬೂ ಸವಾರಿ ಮೆರವಣಿಗೆಯಲ್ಲಿ ಅಂಬಾರಿ ಹೊತ್ತಿದ್ದ ಕರಿಬಸವೇಶ್ವರ ಮಠದ ಲಕ್ಷ್ಮೀ ಆನೆಯ ಮಾವುತ ಸಲೀಮ್ ಬಾಷ ಹಾಗೂ ಜಂಬೂ ಸವಾರಿಯಲ್ಲಿ ಪಾಲ್ಗೊಂಡಿದ್ದ ನೊಣವಿನಕೆರೆ ಮಠದ ಲಕ್ಷ್ಮೀ ಆನೆಯ ಮಾವುತ ಗಂಗಾಧರ್ ಅವರನ್ನು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಉಪ ವಲಯ ಅರಣ್ಯಾಧಿಕಾರಿ ರಬ್ಬಾನಿ, ವಲಯ ಅರಣ್ಯಾಧಿಕಾರಿ ನಮಿತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296