ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಕುರಂಕೋಟೆ ಗ್ರಾಮದ ಹಿರಿಯ ಹೋರಾಟಗಾರರಾದ ಕೆ.ವಿ.ದೊಡ್ಡನರಸಪ್ಪ ಕೊರಟಗೆರೆ ತಾಲ್ಲೂಕು ಆಡಳಿತದಿಂದ ಗೌರವ ಪೂರ್ವಕವಾಗಿ ತಹಶೀಲ್ದಾರ್ ಮಂಜುನಾಥ್ ಕೆ ಸನ್ಮಾನಿಸಿ ಗೌರವಿಸಿದರು.
ಕೆ.ವಿ.ದೊಡ್ಡನರಸಪ್ಪರವರ ಮನೆಗೆ ತೆರಳಿ ತಾಲೂಕು ಮತ್ತು ಜಿಲ್ಲಾ ಆಡಳಿತದ ವತಿಯಿಂದ ಗೌರವ ಸಮರ್ಪಣೆಯನ್ನು ಅರ್ಪಿಸಲಾಯಿತು.
ದೊಡ್ಡನರಸಪ್ಪನವರು ವಿದ್ಯಾರ್ಥಿ ಜೀವನದಲ್ಲಿದ್ದಾಗಲೇ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ ಸೆರೆವಾಸ ಅನುಭವಿಸಿ ಮಹಾತ್ಮ ಗಾಂಧೀಜಿಯವರ ಮಾರ್ಗದರ್ಶನವನ್ನು ಪಡೆದು ತನ್ನ ಜೀವನದಲ್ಲಿ ಅಳವಡಿಸಿಕೊಂಡು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸ್ವಾತಂತ್ರ್ಯಕ್ಕೋಸ್ಕರ ದುಡಿದವರಾಗಿರುತ್ತಾರೆ.
ಪ್ರತಿ ವರ್ಷವೂ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ತಾಲೂಕು ಮತ್ತು ಜಿಲ್ಲಾ ಆಡಳಿತವು ನಮ್ಮ ಮನೆಗೆ ಬಂದು ಸರ್ಕಾರದ ವತಿಯಿಂದ ಸನ್ಮಾನಿಸಿ ಗೌರವಿಸುತ್ತಾರೆ. ತಾಲ್ಲೂಕು ಮತ್ತು ಜಿಲ್ಲಾ ಆಡಳಿತಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ವಿ.ದೊಡ್ಡನರಸಪ್ಪ ತಿಳಿಸಿದರು.
ತಹಶೀಲ್ದಾರ್ ಮಂಜುನಾಥ್ ಕೆ. ಅಂದಿನ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಮತ್ತು ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು.
ಈ ಶುಭ ಸಂದರ್ಭದಲ್ಲಿ ಚನ್ನರಾಯನದುರ್ಗ ಹೋಬಳಿಯ ಉಪ ತಹಶೀಲ್ದಾರ್ ರಾಜು, ಗ್ರಾಮ ಲೆಕ್ಕಾಧಿಕಾರಿಗಳಾದ ರಮೇಶ್,ಸುಧೀಶ್ ಸಿಬ್ಬಂದಿಗಳಾದ ದೊಡ್ಡೇಗೌಡ ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296