nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026
    Facebook Twitter Instagram
    ಟ್ರೆಂಡಿಂಗ್
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಹಿತಿ ಎಸ್‌.ಎಲ್.ಭೈರಪ್ಪ, ಕಥೆಗಾರ ಮೊಗಳ್ಳಿ ಗಣೇಶ್ ಅವರಿಗೆ ನುಡಿನಮನ
    ತುಮಕೂರು October 11, 2025

    ಸಾಹಿತಿ ಎಸ್‌.ಎಲ್.ಭೈರಪ್ಪ, ಕಥೆಗಾರ ಮೊಗಳ್ಳಿ ಗಣೇಶ್ ಅವರಿಗೆ ನುಡಿನಮನ

    By adminOctober 11, 2025No Comments1 Min Read
    sl bhairappa

    ತುಮಕೂರು: ಎಸ್.ಎಲ್.ಭೈರಪ್ಪ ಸೃಜನಶೀಲ ಅನ್ವೇಷಕ. ಕ್ಷೇತ್ರ ಕಾರ್ಯದ ಮೂಲಕ ಮಾಹಿತಿ ಸಂಗ್ರಹಿಸಿ ಅದಕ್ಕೆ ಸೃಜನಶೀಲತೆ, ಕಥನದ ಸ್ಪರ್ಶ ನೀಡಿ ಕಾದಂಬರಿ ರಚಿಸುತ್ತಿದ್ದರು ಎಂದು ಗ್ರಂಥಾಲಯ ಇಲಾಖೆ ಪುಸ್ತಕ ಆಯ್ಕೆ ಸಮಿತಿ ಅಧ್ಯಕ್ಷ ಕರೀಗೌಡ ಬೀಚನಹಳ್ಳಿ ಹೇಳಿದರು.

    ನಗರದಲ್ಲಿ ಶುಕ್ರವಾರ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಏರ್ಪಡಿಸಿದ್ದ ಸಾಹಿತಿ ಎಸ್‌.ಎಲ್.ಭೈರಪ್ಪ, ಕಥೆಗಾರ ಮೊಗಳ್ಳಿ ಗಣೇಶ್ ನುಡಿ ನಮನ, ಸಾಹಿತ್ಯಾವಲೋಕನ ಕಾರ್ಯಕ್ರಮದಲ್ಲಿ ಮಾತನಾಡಿದರು.


    Provided by
    Provided by

    ಮೊಗಳ್ಳಿ ಗಣೇಶ್ ಸಣ್ಣಕಥೆಗಳನ್ನು ಬರೆದು ಪ್ರಸಿದ್ಧರಾಗಿದ್ದರು. ಇಬ್ಬರು ಸಾಹಿತ್ಯ ದಿಗ್ಗಜರ ಅಗಲಿಕೆಯಿಂದ ಕನ್ನಡ ಸಾಹಿತ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.

    ಲೇಖಕ ಎಸ್.ಪಿ.ಪದ್ಮಪ್ರಸಾದ್, ಭೈರಪ್ಪನವರ ಸಾಹಿತ್ಯ ನವೋದಯ, ಬಂಡಾಯ ಅಥವಾ ಇತರೇ ಸಮಕಾಲೀನ ಸಾಹಿತ್ಯದ ಯಾವುದೇ ನಿರ್ದಿಷ್ಟ ಪ್ರಕಾರಕ್ಕೆ ಸೇರುವುದಿಲ್ಲ. ಅನೇಕ ಕೃತಿ, ಪುಸ್ತಕ ಲೋಕಾರ್ಪಣೆಗೆ ಮುನ್ನವೇ ಹಲವು ಮುದ್ರಣ ಕಾಣುತ್ತಿದ್ದವು. ಅವು ಸಾಹಿತ್ಯ ವಲಯದಲ್ಲಿ ಚರ್ಚೆ ಮತ್ತು ವಿವಾದಕ್ಕೆ ಕಾರಣವಾಗುತ್ತಿದ್ದವು. ಅವರಿಗೆ ಜ್ಞಾನಪೀಠ ಪ್ರಶಸ್ತಿ ದೊರೆಯದಿರುವುದು ವಿಷಾದಕರ ಸಂಗತಿ ಎಂದು ತಿಳಿಸಿದರು.

    ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್‌.ಸಿದ್ಧಲಿಂಗಪ್ಪ, ಭೈರಪ್ಪನವರು ಕನಕಪುರದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆ ವಹಿಸಿದ್ದರು. ಅವರ ಭಾಷಣವೇ ಹಲವು ವಿವಾದ ಸೃಷ್ಟಿಸಿತ್ತು. ಬಲಪಂಥೀಯ ವಿಚಾರಧಾರೆಯ ಪ್ರತಿಪಾದಕರಾಗಿದ್ದ ಅವರ ಭಾಷಣವನ್ನು ಎಡಪಂಥೀಯರೆಲ್ಲರೂ ಟೀಕಿಸಿದ್ದರು ಎಂದು ಹೇಳಿದರು.

    ಹರಿಕಥಾ ವಿದ್ವಾನ್‌ ಲಕ್ಷ್ಮಣದಾಸ್, ಲೇಖಕಿ ಎಂ.ಸಿ.ಲಲಿತಾ, ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಚ್.ಎನ್‌.ಚಂದ್ರಶೇಖರ್, ಕೈಗಾರಿಕೋದ್ಯಮಿ ಎಚ್‌.ಜಿ.ಚಂದ್ರಶೇಖರ್, ಪರಿಷತ್ತಿನ ಪದಾಧಿಕಾರಿಗಳಾದ ಎಂ.ಎಚ್.ನಾಗರಾಜ್, ಡಿ.ಎನ್.ಯೋಗೀಶ್ವರಪ್ಪ, ಜಿ.ಎಚ್.ಮಹದೇವಪ್ಪ, ಚಿಕ್ಕಬೆಳ್ಳಾವಿ ಶಿವಕುಮಾರ್, ಪ್ರೊ.ಕಮಲಾ ನರಸಿಂಹ, ಎಲೆರಾಂಪುರ ರುದ್ರಮೂರ್ತಿ ಮೊದಲಾದವರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಆರೈಕೆ ವ್ಯವಸ್ಥೆ ಬಲಪಡಿಸುವ ಸಂಬಂಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ…

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.