ಶ್ರೀರಾಮ ಸೇನೆ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮವನ್ನು ಧಾರವಾಡ ನಗರದ ವಿದ್ಯಾಗಿರಿಯ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ರಾಮಲಿಂಗೇಶ್ವರ ಸಂಸ್ಥಾನ ಮಠದ ಮಾತಾ ವಚನಶ್ರೀ ಮಹಿಳೆಯರಿಗೆ ತ್ರಿಶೂಲ ದೀಕ್ಷಾ ನೀಡಿ.
ಆಮೇಲೆ ಚಮತ್ಕಾರ ನೋಡಿ. ಮಹಿಳೆಯರು ತಮ್ಮ ರಕ್ಷಣೆಗಾಗಿ ಸದಾ ಜಾಗರೂಕರಾಗಿರಬೇಕು. ಜಿಹಾದಿಗಳಿಗೆ ಹಾಗೂ ಕಾಮುಕರಿಗೆ ತಕ್ಕ ಶಾಸ್ತಿ ಮಾಡಲು ಶಸ್ತ್ರ ಬಳಕೆ ಮಾಡಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಉಚ್ಚ ನ್ಯಾಯಾಲಯದ ವಕೀಲರಾದ ಸಚಿನ ಕುಲಕರ್ಣಿ, ಶ್ರೀ ರಾಮ ಸೇನಾ ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ ಸೇರಿದಂತೆ ಹಲವರು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


