ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ.ಈ ಭಾಗದಲ್ಲಿ 6,800 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ.
ಪುರಾ ಮತ್ತು ಮೇಘಾಲಯ ಎರಡರಲ್ಲೂ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಇದು ಬಿಜೆಪಿಗೆ ನಿರ್ಣಾಯಕ ಚುನಾವಣೆ ಎಂದು ಪರಿಗಣಿಸಲಾಗುತ್ತಿದೆ.
ಇತ್ತೀಚೆಗಷ್ಟೇ ಗುಜರಾತ್ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಬಿಜೆಪಿ ಈಗ ಚುನಾವಣೆ ಎದುರಿಸಿರುವ ತ್ರಿಪುರಾ ಮತ್ತು ಮೇಘಾಲಯದತ್ತ ಗಮನ ಹರಿಸುತ್ತಿದೆ.
ಮೋದಿ ಈಶಾನ್ಯ ಕೌನ್ಸಿಲ್‌ನ ಸುವರ್ಣ ಮಹೋತ್ಸವ ಆಚರಣೆ ಮತ್ತು ಶಿಲ್ಲಾಂಗ್‌ನಲ್ಲಿ ನಡೆಯಲಿರುವ ಅದರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy