ನಟಿ ರಶ್ಮಿಕಾ ಮಂದಣ್ಣ ಮಾಡಿರುವ ಪೋಸ್ಟ್ ಕುರಿತು ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ರಶ್ಮಿಕಾ ಟ್ರೋಲ್ ಮತ್ತು ನೆಗೆಟಿವಿಟಿ ಕಾರಣದಿಂದ ನಮಗೆ ಆಗಿರುವ ತೊಂದರೆ ಕುರಿತು ಅವರು ಬಹಿರಂಗ ಪತ್ರ ಬರೆದಿದ್ದಾರೆ. ಈ ಕುರಿತು ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.
ಟ್ರೋಲಿಂಗ್ ಕೆಟ್ಟದ್ದು. ಜನರ ಜೀವನದ ಬಗ್ಗೆ ನಾವು ಅಭಿಪ್ರಾಯಗಳನ್ನು ಹೇರೋಕೆ ಆಗಲ್ಲ. ವಾಸ್ತವ ಆ ವ್ಯಕ್ತಿಗೆ ಮಾತ್ರ ಗೊತ್ತಿರುತ್ತದೆ. ಅವರ ಪಾಡಿಗೆ ಅವರನ್ನು ಇರಲು ಬಿಡಿ ಎಂದು ರಮ್ಯಾ ಬರೆದುಕೊಂಡಿದ್ದಾರೆ.
ಅಂದಹಾಗೆ ‘ವೃತ್ತಿ ಜೀವನ ಆರಂಭ ಆದಾಗಿನಿಂದಲೂ ನನ್ನನ್ನು ದ್ವೇಷಿಸಲಾಗುತ್ತಿದೆ. ಟ್ರೋಲ್ ಮತ್ತು ನೆಗೆಟಿವಿಟಿಗೆ ನಾನು ಪಂಜಿಂಗ್ ಬ್ಯಾಗ್ ರೀತಿ ಆಗಿದ್ದೇನೆ ಎಂದು ಬರೆದುಕೊಂಡಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy