ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಜಾಮೀನಿನಲ್ಲಿ ಹೊರಗಿರುವ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಪ್ರಮುಖ ಆರೋಪಿಗಳಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ.
ಸುಪ್ರೀಂಕೋರ್ಟ್ನಲ್ಲಿ ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದರು. ಇದರ ವಿಚಾರಣೆ ಇಂದು ನಡೆದಿದ್ದು, ಸುಪ್ರೀಂಕೋರ್ಟ್ ಏಳು ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಕರ್ನಾಟಕ ಹೈಕೋರ್ಟ್ ರೇಣುಕಾ ಸ್ವಾಮಿ ಕೊಲೆ ಕೇಸ್ನ ಏಳು ಆರೋಪಿಗಳಿಗೆ ಜಾಮೀನು ನೀಡಿತ್ತು. ಇದನ್ನು ಬೆಂಗಳೂರು ಪೊಲೀಸರು ಸರ್ಕಾರದ ಒಪ್ಪಿಗೆ ಪಡೆದು ಸುಪ್ರೀಂಕೋರ್ಟ್ ನಲ್ಲಿ ಜಾಮೀನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ವಿಚಾರಣೆ ವೇಳೆ ಸರ್ಕಾರ ಪರ ವಕೀಲರು ತಮ್ಮ ವಾದ ಮಂಡಿಸಿದ್ದು, ಆರೋಪಿಗಳು ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ, ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಿ ಎಂದು ಮನವಿ ಮಾಡಿದ್ದಾರೆ. ದರ್ಶನ್ ಅವರು ಸೆಲೆಬ್ರಿಟಿ ಆಗಿದ್ದು, ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರು ಪ್ರಭಾವ ಬಳಸಿ ಸಾಕ್ಷಿಗಳನ್ನು ತಿರುಚುವ ಸಾಧ್ಯತೆ ಇದೆ ಎಂದೂ ಉಲ್ಲೇಖಿಸಲಾಗಿದೆ. ಹೈಕೋರ್ಟ್ ಪರಿಗಣಿಸದ ಹಲವು ಅಂಶಗಳನ್ನು ಇದರಲ್ಲಿ ಹೇಳಲಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4