ಬೆಂಗಳೂರು: ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಿಟ್ಟಮಾರನಹಳ್ಳಿ ಬೈ–ಪಾಸ್‌ನಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಬೆಂಗಳೂರಿನ ಶಿವಪ್ರಕಾಶ್ (37) ಪುಟ್ಟಗೌರಮ್ಮ (72) ಮತ್ತು ಚನ್ನಪಟ್ಟಣದ ಮಂಗದಹಳ್ಳಿಯ ಶಿವರತ್ನ (50) ಎಂದು ಗುರುತಿಸಲಾಗಿದೆ.
ಕಾರಿನಲ್ಲಿದ್ದ ಇನ್ನಿಬ್ಬರು ನಟರಾಜು (42) ಮತ್ತು ಸುಮಾ (36) ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ವ್ಯಾನ್ ಚಾಲಕ ನಾಗೇಶ್ ಕೂಡ ಗಾಯಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4