ಕೋಟಾ: ಟ್ರಕ್ ವೊಂದು ವ್ಯಾನ್ ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಯಾತ್ರಾರ್ಥಿಗಳು ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ನಡೆದಿದೆ.
ಮಧ್ಯಪ್ರದೇಶದ ದೇವಾಸ್ ಜಿಲ್ಲೆಯ ಒಂಬತ್ತು ಯಾತ್ರಾರ್ಥಿಗಳು ಸಿಕರ್ ಜಿಲ್ಲೆಯ ಖತು ಶ್ಯಾಮ್ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ವೇಗವಾಗಿ ಬಂದ ಟ್ರಕ್ ವ್ಯಾನ್ ಗೆ ಡಿಕ್ಕಿ ಹೊಡೆದಿದೆ.
ಮೃತರು 16–40 ವರ್ಷ ವಯೋಮಾನದವರಾಗಿದ್ದು, ಮದನ್ ನಾಯಕ್, ಮಂಗಿಲಾಲ್ ನಾಯಕ್, ಮಹೇಶ್ ನಾಯಕ್, ರಾಜೇಶ್ ಮತ್ತು ಪುನಂ ಎಂದು ಗುರುತಿಸಲಾಗಿದೆ.
ಮೃತರಲ್ಲಿ ಒಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ. ಟ್ರಕ್ ರಸ್ತೆಯ ಡಿವೈಡರ್ ದಾಟಿ ತಪ್ಪು ಬದಿಗೆ ತಿರುಗಿ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ ಎಂದು ಹಿಂದೋಳಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಪವನ್ ಮೀನಾ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q