ಪುಣೆ: ಫುಟ್ಪಾತ್ ನಲ್ಲಿ ಮಲಗಿದ್ದವರ ಮೇಲೆ ಟ್ರಕ್ ವೊಂದು ಹರಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆ ನಗರದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಘಟನೆಯಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ವೈಭವಿ ಪವಾರ್ (1), ವೈಭವ್ ಪವಾರ್ (2) ಮತ್ತು ವಿಶಾಲ್ ಪವಾರ್ (22) ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಸಸೂನ್ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ವಘೋಲಿ ಪ್ರದೇಶದ ಫುಟ್ಪಾತ್ನಲ್ಲಿ ಮಧ್ಯರಾತ್ರಿ 12:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಘಟನೆಯ ನಂತರ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇಶ್ನಂದ್ ಫಾಟಾ ಪ್ರದೇಶದ ಬಳಿಯ ಫುಟ್ ಪಾತ್ ನಲ್ಲಿ ಹಲವರು ಮಲಗಿದ್ದರು, ಬಹುತೇಕ ಮಂದಿ ದಿನಗೂಲಿ ಕಾರ್ಮಿಕರಾಗಿದ್ದಾರೆಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx