ಬೆಂಗಳೂರು: ಭಾರತದ ಆರ್ಥಿಕತೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಟೀಕಿಸಿದ್ದಾರೆ.
ಭಾರತವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದ್ದು, ಜಗತ್ತಿನ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ನಮ್ಮ ಆರ್ಥಿಕತೆಯನ್ನು ‘ಸತ್ತಿದೆ’ ಎಂದು ಹೇಳಲು ಟ್ರಂಪ್ ಕುರುಡರಾಗಿರಬೇಕು ಅಥವಾ ಅಜ್ಞಾನಿಯಾಗಿರಬೇಕು ಎಂದು ದೇವೇಗೌಡರು ಹರಿಹಾಯ್ದಿದ್ದಾರೆ.
ನಾನು ಕೂಡ ಭಾರತದ ಆರ್ಥಿಕತೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಧಾರ ರಹಿತ ಮತ್ತು ಕೋಪದ ಹೇಳಿಕೆಗಳಿಂದ ಆಶ್ಚರ್ಯಚಕಿತನಾಗಿದ್ದೇನೆ. ಆಧುನಿಕ ಇತಿಹಾಸದಲ್ಲಿ ಇಷ್ಟೊಂದು ಅಸ್ಥಿರ, ಅನಾಗರಿಕ ಮತ್ತು ಬೇಜವಾಬ್ದಾರಿಯುತ ರಾಷ್ಟ್ರಮುಖ್ಯಸ್ಥರನ್ನು ನಾನು ಕಂಡಿಲ್ಲ ಎಂದು ಹೇಳಿದ್ದಾರೆ.
ಟ್ರಂಪ್ ಭಾರತದೊಂದಿಗೆ ಮಾತ್ರವಲ್ಲ, ಜಗತ್ತಿನಾದ್ಯಂತ ಪ್ರತೀ ದೇಶದೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ. ಅವರು ತಮ್ಮ ದೀರ್ಘಕಾಲದ ಮಿತ್ರರಾಷ್ಟ್ರಗಳನ್ನು ಬಿಟ್ಟಿಲ್ಲ. ಅವರಲ್ಲಿ ಮೂಲಭೂತವಾಗಿ ಏನೋ ಸಮಸ್ಯೆ ಇದೆ. ರಾಜತಾಂತ್ರಿಕತೆ ಅಥವಾ ರಾಜಕೀಯದ ಮೂಲಕ ಅದನ್ನು ಪತ್ತೆ ಹಚ್ಚಲು ಅಥವಾ ಪರಿಹರಿಸಲು ಸಾಧ್ಯವಿಲ್ಲ. ಅವರ ಕೋಪದ ಸ್ವಭಾವದ ಬಗ್ಗೆ ಇದಕ್ಕಿಂತ ಹೆಚ್ಚಿಗೆ ಹೇಳುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC