ಶಿರಾ: ತಾಲ್ಲೂಕಿನ ಕಳ್ಳಂಬೆಳ್ಳ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ಬೆಳಗಿನ ಜಾವ ಲಾರಿಗೆ ಹಿಂದಿನಿಂದ ಬಂದ ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ.
ಗುಜರಾತ್ನ ಅಮಿತ್ ಪಾಟೀಲ್ (45) ಮತ್ತು ಲತಾ (40) ಮೃತರು. ಗಾಯಾಳುಗಳಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಜರಾತ್ ರಾಜ್ಯದ ತಂಡ ತಿರುಪತಿಯಲ್ಲಿ ದರ್ಶನ ಮುಗಿಸಿಕೊಂಡು ಹಿಂದಿರುಗುವಾಗ ಅಪಘಾತ ಸಂಭವಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


