ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ಪರವಾನಗಿ ಹೊಂದಿರುವುದು ಕಡ್ಡಾಯವೆಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಸೂಚನೆ ನೀಡಿದ್ದಾರೆ.
ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉದ್ದಿಮೆ ನಡೆಸುವ ಉದ್ದಿಮೆದಾರರು ಪಾಲಿಕೆ ವತಿಯಿಂದ ಎಲ್ಲಾ ರೀತಿಯ ಉದ್ದಿಮೆಗಳಿಗೆ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ. ಅನಧಿಕೃತವಾಗಿ ನಡೆಸುತ್ತಿರುವ ಉದ್ದಿಮೆಗಳಿಗೆ ಕೂಡಲೇ ಪರವಾನಗಿ ಪಡೆಯತಕ್ಕದ್ದು. ಉದ್ದಿಮೆ ಪರವಾನಗಿ ಪಡೆಯಲು ಹಾಗೂ ಪರವಾನಗಿ ನವೀಕರಣ ಮಾಡಿಕೊಳ್ಳಲು ನವೆಂಬರ್ 10 ಕಡೆಯ ದಿನವಾಗಿದೆ.
ಪರವಾನಗಿ ಪಡೆಯದ ಉದ್ದಿಮೆಗಳ ವಿರುದ್ಧ ಕರ್ನಾಟಕ ಮುನ್ಸಿಪಲ್ ಕಾರ್ಪೋರೇಷನ್ 1976 ನಿಯಮದ ಪ್ರಕಾರ ಪರವಾನಗಿ ಮೊತ್ತಕ್ಕೆ ತಕ್ಕಂತೆ ದಂಡ ವಿಧಿಸಿ ನಿರ್ದಾಕ್ಷಿಣ್ಯವಾಗಿ ರದ್ದುಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ಸೂಚನೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296