ಬೆಂಗಳೂರು: ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ ಸಾತ್ವಿಕ್ ನ ರಕ್ಷಣಾಕಾರ್ಯಚರಣೆಗೆ ಶ್ರಮಿಸಿದ ಸಿಬ್ಬಂದಿಗಳು ಹಾಗೂ ಮತ್ತು ಸಾರ್ವಜನಿಕರ ಕಾರ್ಯದಕ್ಷತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಂಸಿಸಿದ್ದಾರೆ.
ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ ಸಾತ್ವಿಕ್ ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದ ನಡೆದಿದೆ.
ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ – ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು ಎಂದು ಅವರು ಸಂತಸ ವ್ಯಕ್ತಪಡಿಸಿದರು.
ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಸೂಚನೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


