nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ
    ತುಮಕೂರು April 17, 2026

    ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ

    By adminApril 17, 2026No Comments1 Min Read
    tuberculosis

    ತುಮಕೂರು: ಜಿಲ್ಲೆಯಲ್ಲಿ ಕ್ಷಯರೋಗದ (Tuberculosis) ಹಾವಳಿ ಹೆಚ್ಚಾಗುತ್ತಿದ್ದು, ಸುಮಾರು 682 ಹಳ್ಳಿಗಳಲ್ಲಿ ವಾಸಿಸುವ 7.69 ಲಕ್ಷಕ್ಕೂ ಹೆಚ್ಚು ಜನರು ಈ ರೋಗದ ಅಪಾಯದ ಅಂಚಿನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆಯ ವರದಿ ತಿಳಿಸಿದೆ.

    ಜಿಲ್ಲೆಯ 682 ಹಳ್ಳಿಗಳನ್ನು ಕ್ಷಯರೋಗದ ಹೆಚ್ಚಿನ ಅಪಾಯವಿರುವ ಪ್ರದೇಶಗಳೆಂದು ಗುರುತಿಸಲಾಗಿದೆ. ಇಲ್ಲಿ ಒಟ್ಟು 7,69,111 ಜನರು ವಾಸಿಸುತ್ತಿದ್ದಾರೆ. ಈ ಗ್ರಾಮಗಳಲ್ಲಿ ಪ್ರಸ್ತುತ 345 ಸಕ್ರಿಯ ಕ್ಷಯರೋಗ ಪ್ರಕರಣಗಳು ವರದಿಯಾಗಿವೆ.


    Provided by
    Provided by

    ತೀವ್ರ ಅಪೌಷ್ಟಿಕತೆ, ಮಧುಮೇಹ (Diabetes), ರಕ್ತದೊತ್ತಡ (BP) ಮತ್ತು ಬಡತನದ ಕಾರಣದಿಂದಾಗಿ ಈ ಭಾಗದ ಜನರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತಿದ್ದು, ಕ್ಷಯರೋಗ ಬೇಗ ಹರಡುತ್ತಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ‘ಕ್ಷಯ ಮುಕ್ತ ಭಾರತ’ ಅಭಿಯಾನದಡಿ 100 ದಿನಗಳ ವಿಶೇಷ ಪತ್ತೆ ಹಚ್ಚುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ 682 ಹಳ್ಳಿಗಳಲ್ಲಿ ‘ನಿ–ಕ್ಷಯ್’ ಶಿಬಿರಗಳನ್ನು ಆಯೋಜಿಸಿ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ತಪಾಸಣೆ ನಡೆಸಲಾಗುತ್ತಿದೆ.

    ರೋಗ ಲಕ್ಷಣಗಳು ಕಂಡುಬಂದವರಿಗೆ ತಕ್ಷಣ ಚಿಕಿತ್ಸೆ ನೀಡಲಾಗುತ್ತಿದ್ದು, ‘ನಿ–ಕ್ಷಯ್ ಮಿತ್ರ’ ಯೋಜನೆಯಡಿ ದಾನಿಗಳು ಮತ್ತು ಸರ್ಕಾರದ ಮೂಲಕ ರೋಗಿಗಳಿಗೆ ಬೇಳೆಕಾಳು, ಮೊಟ್ಟೆ ಮತ್ತು ಧಾನ್ಯಗಳನ್ನೊಳಗೊಂಡ ಪೌಷ್ಟಿಕ ಆಹಾರದ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

    “ಹೆಚ್ಚು ಜನಸಂದಣಿ ಇರುವ ಗ್ರಾಮಗಳಲ್ಲಿ ಮತ್ತು ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಲ್ಲಿ ರೋಗ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಪತ್ತೆ ಹಚ್ಚುವ ಕಾರ್ಯವನ್ನು ಚುರುಕುಗೊಳಿಸಲಾಗಿದೆ,” ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಆರ್.ಬಿ. ಮೋಹನ್‌ದಾಸ್ ತಿಳಿಸಿದ್ದಾರೆ.

    ಜಿಲ್ಲೆಯ 51 ಗ್ರಾಮ ಪಂಚಾಯಿತಿಗಳನ್ನು ಈಗಾಗಲೇ ಕ್ಷಯ ಮುಕ್ತ ಎಂದು ಗುರುತಿಸಲಾಗಿದೆ. ಒಂದು ಸಾವಿರ ಜನಸಂಖ್ಯೆಗೆ ಒಂದಕ್ಕಿಂತ ಕಡಿಮೆ ಪ್ರಕರಣ ದಾಖಲಾದರೆ ಆ ಪಂಚಾಯಿತಿಯನ್ನು ಕ್ಷಯ ಮುಕ್ತ ಎಂದು ಪರಿಗಣಿಸಲಾಗುತ್ತದೆ. ಇಡೀ ಜಿಲ್ಲೆಯನ್ನು ಈ ಗುರಿಯತ್ತ ಕೊಂಡೊಯ್ಯಲು ಇಲಾಖೆ ಶ್ರಮಿಸುತ್ತಿದೆ.

    ಸಾರ್ವಜನಿಕರು ಸಕಾಲಕ್ಕೆ ತಪಾಸಣೆ ಮಾಡಿಸಿಕೊಂಡು, ರೋಗದ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಚಿಕಿತ್ಸೆ ಪಡೆಯುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.