ತುಮಕೂರು: ಬಿಗ್ಬಾಸ್ ಸ್ಪರ್ಧಿಯಾಗಿದ್ದ ಹಾಸ್ಯನಟ ತುಕಾಲಿ ಸಂತೋಷ್ ಪ್ರಯಾಣಿಸುತ್ತಿದ್ದ ಹೊಸ ಕಾರು ಡಿಕ್ಕಿಯಾಗಿ ಗಾಯಗೊಂಡಿದ್ದ ಆಟೊ ಚಾಲಕ ಜಗದೀಶ್ 42 ಗುರುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ.
ನಿನ್ನೆ ರಾತ್ರಿ ಕಾರು ಅಪಘಾತದಿಂದ ಜಗದೀಶ್ ಅವರ ಎದೆ ಭಾಗ ಹಾಗೂ ಮುಖದ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಇವರಿಗೆ ಕುಣಿಗಲ್ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಜಗದೀಶ್ ಅವರ ಸಂಬಂಧಿಕರು ಯಾರು ಕೂಡ ಬಂದಿರಲಿಲ್ಲ. ಮಧ್ಯ ವ್ಯಸನಿಯಾಗಿದ್ದ ಜಗದೀಶ್ ಅನೇಕ ಬಾರಿ ಇಂತಹ ಅಪಘಾತಗಳಿಂದ ಚೇತರಿಸಿಕೊಂಡಿದ್ದರು. ಈ ಬಾರಿಯೂ ಸಾಮಾನ್ಯ ಎಂಬ ಅಪಘಾತದಿಂದ ಇವರು ಚೇತರಿಸಿಕೊಳ್ಳಲಿದ್ದಾರೆ ಎಂಬ ನಂಬಿಕೆ ಅವರ ಕುಟುಂಬದವರಲ್ಲಿತ್ತು. ಆದರೆ ದುರದೃಷ್ಟವಶಾತ್ ಇಂದು ಮುಂಜಾನೆ 3 ಗಂಟೆ ಸಂದರ್ಭದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹೊನ್ನೇನಹಳ್ಳಿ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿತ್ತು, ತುಕಾಲಿ ಸಂತೋಷ್ ಪ್ರಯಾಣಿಸುತ್ತಿದ್ದ ಕಾರು ಆಟೋವೊಂದಕ್ಕೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಗಾಯಗೊಂಡಿದ್ದ ಆಟೊ ಚಾಲಕ ಜಗದೀಶ್ ನನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೆ ಜಗದೀಶ್ ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಹೊಸ ಕಿಯಾ ಸೆಲ್ಲೋಸ್ ಕಾರನ್ನು ತುಕಾಲಿ ಸಂತೋಷ್ ಖರೀದಿ ಮಾಡಿದ್ದರು. ಹೊಸ ಕಾರು ಮನೆಗೆ ಬಂದು ಎರಡು ವಾರ ಕಳೆಯುವಷ್ಟರಲ್ಲೇ ಅಪಘಾತ ಸಂಭವಿಸಿದೆ. ಕುಣಿಗಲ್ ಮಾರ್ಗವಾಗಿ ತುಕಾಲಿ ಸಂತೋಷ್ ದಂಪತಿ ಹಾಸನ ಜಿಲ್ಲೆ ಹೊಳೆನರಸೀಪುರ ಕಡೆಗೆ ಪ್ರಯಾಣಿಸುತ್ತಿದ್ದರು. ಇದೇ ವೇಳೆ ಕುಣಿಗಲ್ ಕಡೆಯಿಂದ ಕುರುಡಿಹಳ್ಳಿಗೆ ಬರುತ್ತಿದ್ದ ಆಟೊ ಮತ್ತು ತುಕಾಲಿ ಸಂತೋಷ್ ಅವರು ಪ್ರಯಾಣಿಸುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿತ್ತು. ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


