nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!

    October 3, 2026

    ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು

    October 3, 2026
    Facebook Twitter Instagram
    ಟ್ರೆಂಡಿಂಗ್
    • ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!
    • ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!
    • ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು
    • ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ
    • ಇಂದು ತುಮಕೂರಿಗೆ ಭೇಟಿಕೊಡಲಿದೆ ಕೇಂದ್ರದ ಬರ ಅಧ್ಯಯನ ತಂಡ: ರೈತರ ಬೇಡಿಕೆಗಳೇನು?
    • SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್
    • ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ
    • ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೃಕ್ಷ ಸಂರಕ್ಷಕಿ ತುಳಸಿ ಗೌಡ ನಿಧನ: ವಿಧಾನಸಭೆಯಲ್ಲಿ ಸಂತಾಪ ಸೂಚನೆ
    ರಾಜ್ಯ ಸುದ್ದಿ December 17, 2024

    ವೃಕ್ಷ ಸಂರಕ್ಷಕಿ ತುಳಸಿ ಗೌಡ ನಿಧನ: ವಿಧಾನಸಭೆಯಲ್ಲಿ ಸಂತಾಪ ಸೂಚನೆ

    By adminDecember 17, 2024No Comments1 Min Read
    tulsi gowda

    ಬೆಳಗಾವಿ ಸುವರ್ಣಸೌಧ: ವೃಕ್ಷಮಾತೆ ಎಂದೇ ಜನಪ್ರಿಯರಾಗಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕು ಹೊನ್ನಳ್ಳಿ ಗ್ರಾಮದ ವೃಕ್ಷ ಸಂರಕ್ಷಕಿ ತುಳಸಿ ಗೌಡ ನಿಧನಕ್ಕೆ ಮಂಗಳವಾರ ವಿಧಾನ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು.

    ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸಂತಾಪ ನಿರ್ಣಯ ಮಂಡಿಸಿ ತುಳಸಿ ಗೌಡ ಅವರ ನಿಧನಕ್ಕೆ ವಿಷಾದ ವ್ಯಕ್ತಪಡಿಸಿದರು.

    ತುಳಸಿ ಗೌಡ ಅವರು ಹಾಲಕ್ಕಿ ಬುಡಕಟ್ಟು ಸಮುದಾಯದ ಬಡಕುಟುಂಬದಲ್ಲಿ ಜನಿಸಿದ್ದು, ಪರಿಸರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಮರಗಳೊಂದಿಗೆ ಅನುಭವ ಹಾಗೂ ಅಪಾರ ಜ್ಞಾನವನ್ನು ಹೊಂದಿದ್ದ ಅವರು ಅರಣ್ಯದ ಎನ್‌ಸೈಕ್ಲೋಪೀಡಿಯಾ, ವೃಕ್ಷ ಮಾತೆ ಎಂದೇ ಪ್ರಖ್ಯಾತರಾಗಿದ್ದರು. ಮುನ್ನೂರಕ್ಕೂ ಹೆಚ್ಚಿನ ಮರಗಳ ಪ್ರಬೇಧಗಳನ್ನು ತಿಳಿದಿದ್ದ ಅವರು ನಿಂತ ಜಾಗದಲ್ಲೇ ಅವುಗಳ ಬಗ್ಗೆ ವಿವರಿಸುವಷ್ಟು ಜ್ಞಾನವನ್ನು ಹೊಂದಿದ್ದರು. ಅರಣ್ಯ ಇಲಾಖೆಯ ಜೊತೆಗೆ ಕೈಜೋಡಿಸಿ 65ಕ್ಕೂ ಹೆಚ್ಚು ವರ್ಷಗಳಿಂದ ಪರಿಸರ ಸಂರಕ್ಷಣೆ ಹಾಗೂ ಪರಿಸರ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿದ್ದರು. ಬಾಲ್ಯದಲ್ಲೇ ವಿಧವೆಯಾದ ತುಳಸಿಗೌಡ ಮರಗಳಲ್ಲೇ ಮಕ್ಕಳು ಹಾಗೂ ಕುಟುಂಬವನ್ನು ಕಂಡವರು. ಒಂದು ಕಾಲದಲ್ಲಿ ಕಾಡಿನಿಂದ ಸೌದೆ ತರುತ್ತಿದ್ದ ಅವರು ಇಂದು ಕಾಡನ್ನೇ ನಿರ್ಮಿಸಿ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ. ಲಕ್ಷಾಂತರ ಮರಗಳನ್ನು ನೆಟ್ಟು ಪೋಷಿಸಿದ್ದ ಅವರ ಪರಿಸರ ಪ್ರೇಮಕ್ಕಾಗಿ 2021ರಲ್ಲಿ ಪದ್ಮಶ್ರೀ ಪ್ರಶಸ್ತಿ ಒಲಿದಿತ್ತು. ಅಲ್ಲದೆ, ರಾಜ್ಯೋತ್ಸವ, ಪ್ರಿಯದರ್ಶಿನಿ ವೃಕ್ಷಮಿತ್ರ ಸೇರಿದಂತೆ ಹಲವು ಪ್ರಶಸ್ತಿಗಳು ಇವರಿಗೆ ಸಂದಿವೆ. ವೃಕ್ಷಗಳ ಆರೈಕೆ ಮೂಲಕ ಪ್ರಸಿದ್ದಿ ಪಡೆದಿದ್ದ 81 ವರ್ಷದ ವೃಕ್ಷಮಾತೆ ಶ್ರೀಮತಿ ತುಳಸಿ ಗೌಡ ಅವರು ಸೋಮವಾರ ನಿಧನರಾಗಿದ್ದಾರೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.

    ಕಾನೂನು ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ ತುಳಸಿ ಗೌಡ ನಿಧನಕ್ಕೆ ವಿಷಾಧ ವ್ಯಕ್ತಪಡಿಸಿದರು. ಸದನದಲ್ಲಿ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!

    October 3, 2026

    ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು

    October 3, 2026

    ಚುನಾವಣೆ ಗೆಲ್ಲಲು ಹಣ, ಮದ್ಯ, ಜಾತಿ ಲೆಕ್ಕಾಚಾರ? ಸಿದ್ದರಾಮಯ್ಯ ಹೇಳಿದ್ದೇನು?

    October 2, 2026

    Comments are closed.

    Our Picks

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಭಾರತದ ಲೆಗ್‌ ಸ್ಪಿನ್ನರ್ ಯಜುವೇಂದ್ರ ಚಾಹಲ್ ರೆಡ್‌-ಬಾಲ್‌ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಶುಕ್ರವಾರ ಈ ನಿರ್ಧಾರ ಪ್ರಕಟಿಸಿರುವ ಅವರು, ತಕ್ಷಣದಿಂದ…

    ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!

    October 3, 2026

    ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.