nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಸೆಪ್ಟೆಂಬರ್ 1, 2 ಮತ್ತು 3ರಂದು ಎಐಡಿಎಸ್‍ ಓ  8ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಸಮ್ಮೇಳನ
    ತುಮಕೂರು August 25, 2023

    ತುಮಕೂರು: ಸೆಪ್ಟೆಂಬರ್ 1, 2 ಮತ್ತು 3ರಂದು ಎಐಡಿಎಸ್‍ ಓ  8ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಸಮ್ಮೇಳನ

    By adminAugust 25, 2023No Comments3 Mins Read
    aidso

    ರಾಜ್ಯ ಮಟ್ಟದ ವಿದ್ಯಾರ್ಥಿ ಸಮ್ಮೇಳದ ಕುರಿತು ಪತ್ರಿಕಾಗೋಷ್ಟಿಯು ತುಮಕೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಎಐಡಿಎಸ್‍ ಓ ರಾಜ್ಯ ಅಧ್ಯಕ್ಷರಾದ  ಅಶ್ವಿನಿ ಕೆ.ಎಸ್ ಮಾತನಾಡಿದರು.

    “ಶಿಕ್ಷಣವೆಂದರೆ ಅಗಾಧ ಪ್ರಮಾಣದ ಮಾಹಿತಿಯನ್ನು ಮೆದುಳೊಳಗೆ ತುಂಬಿಕೊಂಡು, ಜೀವನವಿಡೀ ಜೀರ್ಣವೇ ಆಗದಂತೆ ಅಲ್ಲಿಯೇ ಕೊಳೆಸುವಂತಹದ್ದಲ್ಲ. ನಮಗೆ ಜೀವನವನ್ನು ಕಟ್ಟಿಕೊಳ್ಳುವ, ಮನುಷ್ಯರನ್ನಾಗಿಸುವ ಮೌಲ್ಯಗಳನ್ನು ಬೆಳೆಸುವ – ಈ ಎಲ್ಲ ವಿಚಾರಗಳನ್ನು ಸಮೀಕರಿಸುವಂತಹ ಶಿಕ್ಷಣ ಬೇಕು. ಶಿಕ್ಷವು ಕೇವಲ ಮಾಹಿತಿ ಎಂದಾಗಿಬಿಟ್ಟರೆ, ಗಂಥಾಲಯಗಳೇ ಪ್ರಪಂಚದ ಮಹಾನ್ ಸಂತರುಗಳಾಗಿ ಮತ್ತು ವಿಶ್ವಕೋಶವೇ ಋಷಿಗಳಾಗಿರುತ್ತಿದ್ದವು.”ಶಿಕ್ಷಣದ ಗುರಿ ಮತ್ತು ಮಹತ್ವದ ಕುರಿತು ವಿವೇಕಾನಂದರು ಈ ರೀತಿ ಹೇಳುತ್ತಾರೆ. ಅಂತೆಯೇ, ನಮ್ಮ ದೇಶದ ನವೋದಯ ಚಿಂತಕರಾದ ಈಶ್ವರಚಂದ್ರ ವಿದ್ಯಾಸಾಗರ್, ರಾಜಾರಾಮ್ ಮೋಹನ್ ರಾಯ್, ಜ್ಯೋತಿ ಬಾ ಫುಲೆ, ಸಾವಿತ್ರಿ ಬಾ ಫುಲೆ ಇವರು ವೈಜ್ಞಾನಿಕ, ಪ್ರಜಾತಾಂತ್ರಿಕ ಹಾಗೂ ಧರ್ಮನಿರಪೇಕ್ಷ ಶಿಕ್ಷಣ ನಮ್ಮದಾಗಬೇಕು ಎಂಬ ಮಹತ್ತರ ಆಶಯಗಳನ್ನು ಹೊಂದಿದ್ದರು. ಅಪ್ರತಿಮ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಈ ಮೇಲಿನ ಆಶಯಗಳನ್ನು ಎತ್ತಿ ಹಿಡಿಯುತ್ತಾ, ಮುಂದುವರೆದು ಶಿಕ್ಷಣಕ್ಕೆ ಹಣ ಒದಗಿಸುವ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರವೇ ವಹಿಸಬೇಕು ಎಂದು ಹೇಳಿದ್ದರು. ಒಟ್ಟಾರೆಯಾಗಿ ಶಿಕ್ಷಣವು ಹುಟ್ಟುವ ಪ್ರತಿಯೊಂದು ಮಗುವಿನ ಹಕ್ಕು ಎನ್ನುವುದು ಕೇವಲ ಮಾತಾಗಿ ಉಳಿಯದೆ, ಕ್ರಿಯೆಯಲ್ಲಿ ಅದನ್ನು ಅನುಷ್ಠಾನಕ್ಕೆ ತರಲು ಶ್ರಮಿಸಿದ್ದರು.


    Provided by
    Provided by

    ಆದರೆ, ಪ್ರಸ್ತುತ ಶಿಕ್ಷಣವು ಈ ಎಲ್ಲ ಆಶಯಗಳಿಂದ ಕ್ರಮೇಣ ದೂರವಾಗುತ್ತಿದೆ ಎನ್ನುವುದನ್ನು ನಾವೆಲ್ಲರೂ ಬಹಳ ನೋವಿನಿಂದ ಗಮನಿಸುತ್ತಿದ್ದೇವೆ. ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ, ಶೈಕ್ಷಣಿಕ ವಲಯವನ್ನು ಅಭಿವೃದ್ಧಿಗೊಳಿಸಿ, ಕಡೆಯ ಮಗುವಿಗೂ ಶಿಕ್ಷಣ ದಕ್ಕುವಂತೆ ಮಾಡುವುದು ಅವರ ಆದ್ಯತೆಯಾಗಿ ಉಳಿದಿಲ್ಲ. ಬದಲಿಗೆ, ಸರ್ಕಾರವು ತನ್ನ ಶೈಕ್ಷಣಿಕ ನೀತಿ-ನಿಲುವುಗಳ ಮೂಲಕ ಶಿಕ್ಷಣವನ್ನು ಮತ್ತಷ್ಟು ಖಾಸಗೀಕರಣಗೊಳಿಸುತ್ತಿದೆ. ಒಂದೆಡೆ, ಸರ್ಕಾರಿ ಶಿಕ್ಷಣ ಸಂಸ್ಥೆಗಳ ಸಂಪೂರ್ಣ ನಿರ್ವಹಣೆ -ಅಂದರೆ, ಹಣ ಒದಗಿಸುವ, ಮೂಲಭೂತ ಸೌಕರ್ಯಗಳನ್ನು ನೀಡುವ, ಅಗತ್ಯ ಸಂಖ್ಯೆಯ ಶಿಕ್ಷಕರನ್ನು ನೇಮಿಸುವ ತನ್ನ ಮುಖ್ಯ ಕರ್ತವ್ಯಗಳಿಂದ ಸರ್ಕಾರವು ತಪ್ಪಿಸಿಕೊಳ್ಳುತ್ತಾ, ಮತ್ತೊಂದೆಡೆ ಎನ್‍ಈಪಿ-2020, ಸ್ವಯಂ ಹಣಕಾಸು ಸಂಸ್ಥೆಗಳು(ಕಾಲೇಜು ನಡೆಸಲು ವಿದ್ಯಾರ್ಥಿಗಳಿಂದಲೇ ಪೂರ್ತಿ ಹಣ ಪಡೆಯುವುದು), ಸರ್ಕಾರಿ ಶಾಲೆಗಳ ವಿಲೀನ (ಕಡಿಮೆ ಹಾಜರಾತಿ ಇರುವ ಶಾಲೆಗಳನ್ನು ಮುಚ್ಚುವುದು), ನಾಲ್ಕು ವರ್ಷಗಳ ಪದವಿ ಕೋರ್ಸ್ ಮುಂತಾದ ಹತ್ತು ಹಲವು ನೀತಿಗಳ ಮೂಲಕ ಸರ್ಕಾರವು ಶಿಕ್ಷಣವನ್ನು ಖಾಸಗಿ ಮಡಿಲಿಗೆ ಹಾಕಿ, ಲಕ್ಷಾಂತರ ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ದೂರ ತಳ್ಳುತ್ತಿದೆ.

    ಶಿಕ್ಷಣ ಮತ್ತು ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಎಐಡಿಎಸ್‍ ಓ ಸಂಘಟನೆಯು ಕರ್ನಾಟಕ ರಾಜ್ಯದಲ್ಲಿ ಕಳೆದ 5 ದಶಕಗಳಿಂದಲೂ ಚಳುವಳಿಗಳನ್ನು ಬೆಳೆಸುತ್ತಾ ಬಂದಿದೆ. ಶುಲ್ಕ ಏರಿಕೆ ವಿರೋಧಿ ಚಳುವಳಿ, ಹಾಸ್ಟೆಲ್ ಚಳುವಳಿಗಳು, ಸರ್ಕಾರಿ ಶಾಲೆ ಉಳಿಸಲು ಹೋರಾಟ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ವಿರೋಧಿಸಿ ಹೋರಾಟ, ಉಚಿತ ಬಸ್ ಪಾಸ್ ಗಾಗಿ ಹೋರಾಟ.. ಇನ್ನಿತರ ಹತ್ತಾರು ಚಳುವಳಿಗಳನ್ನು ಎಐಡಿಎಸ್‍ಓ ಮುನ್ನಡೆಸಿದೆ. ಕಳೆದ ವರ್ಷ ‘ಸಾರ್ವಜನಿಕ ಶಿಕ್ಷಣ ಉಳಿಸಿ’ ಬೃಹತ್ ಆಂದೋಲನವನ್ನು ನೀವೆಲ್ಲರೂ ಗಮನಿಸಿದ್ದೀರಿ. ರಾಜ್ಯದಾದ್ಯಂತ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿ 35 ಲಕ್ಷಕ್ಕೂ ಅಧಿಕ ಸಹಿಗಳನ್ನು ಸಂಗ್ರಹ ಮಾಡಿದ್ದೆವು. ರಾಜ್ಯದಲ್ಲಿ ಈ ಆಂದೋಲನವು ದೊಡ್ಡ ಪ್ರಭಾವ ಬೀರಿದ್ದು, ನೂರಾರು ಶಿಕ್ಷಕರು, ಪ್ರಾಂಶುಪಾಲರು, ಪೋಷಕರು ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು.

    ಈಗ ನಮ್ಮ ಮುಂದಿರುವ ವಿದ್ಯಾರ್ಥಿಗಳ ರಾಜ್ಯ ಸಮ್ಮೇಳನವು ಈ ಚಳುವಳಿಗಳನ್ನು ಮತ್ತಷ್ಟು ಬಲಗೊಳಿಸುವ ಗುರಿಯನ್ನು ಹೊಂದಿದೆ. ನವೋದಯ ಚಿಂತಕರ ಹಾಗೂ ಕ್ರಾಂತಿಕಾರಿಗಳ ಆಶಯವನ್ನು ನಾವು ಪೂರ್ಣಗೊಳಿಸಬೇಕು. ಈ ವಿದ್ಯಾರ್ಥಿ ಸಮ್ಮೇಳನದ ಮೂಲಕ ಶೈಕ್ಷಣಿಕ ಸಮಸ್ಯೆಗಳ ವಿರುದ್ಧ ಪ್ರಬಲ ಸಂಘಟಿತ ಹೋರಾಟಗಳನ್ನು ಬೆಳೆಸುವ ಸಂಕಲ್ಪವನ್ನು ನಾವು ತೊಡಬೇಕು, ಎಲ್ಲಿಯವರೆಗೂ ಶಿಕ್ಷಣವು ಸರ್ಕಾರಗಳ ಆದ್ಯತೆ ಆಗುವದಿಲ್ಲವೋ, ಅಲ್ಲಿಯವರೆಗೂ ನಮ್ಮ ಮೂಲಭೂತ ಹಕ್ಕುಗಳನ್ನು ಹೋರಾಟದ ಮೂಲಕವೇ ನಾವು ಗೆದ್ದುಕೊಳ್ಳಬೇಕು ಎಂದು ಎಐಡಿಎಸ್‍ಓ ನಂಬುತ್ತದೆ. ಸೆಪ್ಟೆಂಬರ್ 1, 2 ಮತ್ತು 3, ತುಮಕೂರಿನಲ್ಲಿ ಸಂಘಟಿಸಿರುವ  ರಾಜ್ಯಮಟ್ಟದ ವಿದ್ಯಾರ್ಥಿ ಸಮ್ಮೇಳನವನ್ನು ಯಶಸ್ವಿಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬ ವಿದ್ಯಾರ್ಥಿಯ ಮೇಲಿದೆ. ಈ ಜವಾಬ್ದಾರಿಯನ್ನು ರಾಜ್ಯದ ವಿದ್ಯಾರ್ಥಿಗಳು ಅತ್ಯಂತ ಸಂತೋಷದಿಂದ ಮತ್ತು ದೃಢ ನಿಶ್ಚಯದೊಂದಿಗೆ ನಿಭಾಯಿಸಿ, ರಾಜ್ಯದಲ್ಲಿ ವಿದ್ಯಾರ್ಥಿ ಚಳುವಳಿಯನ್ನು ಮುನ್ನಡೆಸುವರು ಎಂಬ ವಿಶ್ವಾಸ ನಮಗಿದೆ ಎಂದರು.

    ಪತ್ರಿಕಾ ಗೋಷ್ಟಿಯಲ್ಲಿ ರಾಜ್ಯ ಸೆಕ್ರೇಟರಿಯೇಟ್ ಸದಸ್ಯರಾದ ಅಪೂರ್ವ ಸಿ.ಎಂ, ಜಿಲ್ಲಾ ಕಾರ್ಯದರ್ಶಿಗಳಾದ ಲಕ್ಕಪ್ಪ ಸಿ.ಬಿ, ಸಂಘಟನಾಕಾರರಾದ ಚುಕ್ಕಿ, ಮಿಥುನ್ ಭಾಗವಹಿಸಿದ್ದರು. ಪತ್ರಿಕಾ ಗೋಷ್ಟಿಯ ಅಧ್ಯಕ್ಷತೆಯನ್ನು ಜಿಲ್ಲಾ ಅಧ್ಯಕ್ಷರಾದ ಅಶ್ವಿನಿ ಟಿ.ಇ ವಹಿಸಿದ್ದರು.

    ಸಮ್ಮೇಳನದ ಬೇಡಿಕೆಗಳು:

    ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಒದಗಿಸಿ!!

    ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಿ!

    ಪಠ್ಯಕ್ರಮದ ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿ ಧರ್ಮನಿರಪೇಕ್ಷ ವಾತಾವರಣವನ್ನು ರಕ್ಷಿಸಿ!

    ವಿದ್ಯಾರ್ಥಿವೇತನ ಮತ್ತು ಹಾಸ್ಟೆಲ್ ಸೌಲಭ್ಯಗಳನ್ನು ಖಾತ್ರಿಪಡಿಸಿ!

    ಸ್ವಯಂ ಹಣಕಾಸು ಸಂಸ್ಥೆಗಳನ್ನು ನಿಲ್ಲಿಸಿ, ತಾರತಮ್ಯವಿಲ್ಲದೆ ಎಲ್ಲಾ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಿರಿ!

    ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಿ

    ಅತಿಥಿ ಶಿಕ್ಷಕರ ಹಕ್ಕುಗಳನ್ನು ರಕ್ಷಿಸಿ!!!

    admin
    • Website

    Related Posts

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’

    April 15, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.