ತುಮಕೂರು: ಅನೇಕ ದಿನಗಳಿಂದ ನಡೆಯುತ್ತಿರುವ ಹೇಮಾವತಿ ಲಿಂಕ್ ಕೆನಾಲ್ ವಿರೋಧಿ ಹೋರಾಟದ ಬೆನ್ನಲ್ಲೆ ಜಿಲ್ಲೆಯ ಕುಣಿಗಲ್ ನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಪರ ಪ್ರತಿಭಟನೆ ನಡೆದಿದೆ.
ಕುಣಿಗಲ್ ತಾಲ್ಲೂಕು ಕಚೇರಿ ಬಳಿ ನೂರಾರು ರೈತರಿಂದ ಪ್ರತಿಭಟನೆ ನಡೆಸಲಾಗಿದ್ದು ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸದಂತೆ ಒತ್ತಾಯಿಸಲಾಯಿತು.
ನಮ್ಮ ಪಾಲಿನ ನೀರನ್ನ ನಮಗೆ ಕೊಡಿ ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ ರೈತರು. ಅಮೃತೂರು ಹಾಗೂ ಯಡಿಯೂರು ಹೋಬಳಿ ವ್ಯಾಪ್ತಿಯ ರೈತರಿಂದ ಪ್ರತಿಭಟನೆ ನಡೆಸಲಾಯಿತು.
ಕೆಲ ದಿನಗಳಿಂದ ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ಜಿಲ್ಲೆಯ ವಿವಿಧಡೆ ಹಲವು ಬಾರಿ ಹೋರಾಟ ಹಾಗೂ ತುಮಕೂರು ಜಿಲ್ಲೆಯನ್ನ ಬಂದ್ ಮಾಡಲಾಗಿತ್ತು.
ಹೇಮಾವತಿ ಲಿಂಕ್ ಕೆನಾಲ್ ವಿರೋಧಿ ಸಮಿತಿಯಿಂದ ತುಮಕೂರು ಬಂದ್ ಗೆ ಕರೆ ಕೊಡಲಾಗಿತ್ತು. ಯಾವುದೇ ಕಾರಣಕ್ಕೂ ಹೇಮಾವತಿ ನೀರನ್ನ ಕೊಡಲ್ಲ ಎಂದು ವಿರೋಧಿಸಿ ಪ್ರತಿಭಟನೆ ನಡೆಸಲಾಗಿತ್ತು.
ಈ ಬೆನ್ನಲ್ಲೆ ಕುಣಿಗಲ್ ಭಾಗದ ರೈತರಿಂದ ಇಂದು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಲಾಯಿತು. ಕುಣಿಗಲ್ ತಹಶಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಯೋಜನೆ ಹಿನ್ನೆಲೆ:
ಹೇಮಾವತಿ ನೀರನ್ನ ತುಮಕೂರಿನ ಗುಬ್ಬಿಯಿಂದ ಕುಣಿಗಲ್ ಮಾರ್ಗವಾಗಿ ಮಾಗಡಿಗೆ ತೆಗೆದುಕೊಂಡು ಹೋಗುವ ಹೇಮಾವತಿ ಲಿಂಕ್ ಕೆನಾಲ್ ಯೋಜನೆಯಾಗಿದೆ. ಸುಮಾರು 1 ಸಾವಿರ ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಕಾಮಗಾರಿ ಯೋಜನೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA