ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತುಮಕೂರು ಜಿಲ್ಲೆ ತಿಪಟೂರು ಬಂದ್ ಗೆ ಕರೆ ನೀಡಲಾಗಿದೆ.
ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಕ್ಷೇತ್ರ ತಿಪಟೂರು ಬಂದ್ ಗೆ ಕರೆ ನೀಡಲಾಗಿದ್ದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಬಂದ್ ಶಾಂತಿಯುತವಾಗಿ ನಡೆಯುತ್ತಿದೆ. ತಿಪಟೂರು ಹೋರಾಟ ಸಮಿತಿಯ ನೇತೃತ್ವದಲ್ಲಿ ಬಂದ್ ಮಾಡಲಾಗಿದೆ.
ಮುಖ್ಯವಾಗಿ ಕೊಬ್ಬರಿ ಬೆಳೆಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಿಸಲಾಗಿದೆ. ತಿಪಟೂರಿನಲ್ಲಿ ಅಂಗಡಿ ಮುಂಗಟ್ಟು ಬಂದ್ ಆಗಿವೆ. ಬಂದ್ ಗೆ ವ್ಯಾಪಾರಿಗಳು ಸಂಘಸಂಸ್ಥೆಗಳು ಶಿಕ್ಷಣ ಸಂಸ್ಥೆಗಳು, ಆಟೋಚಾಲಕರು, ಹೋಟಲ್ ಮಾಲೀಕರು ಬೆಂಬಲ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


