ತುಮಕೂರು: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಸಾರಿಗೆ ನೌಕರರು, ಮತ್ತು ಅನೇಕ ಅಂಬೇಡ್ಕರ್ ವಾದಿ ಸಂಘಟನೆಗಳು ಸೇರಿ ಸೆಪ್ಟಂಬರ್ 10ರಂದು ತುಮಕೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಭೀಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಅಂದು ಸುಮಾರು 12 ಗಂಟೆಯ ವೇಳೆಗೆ ಟೌನ್ ಹಾಲ್ ನಿಂದ ತುಮಕೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದವರೆಗೆ ಮೆರವಣಿಗೆ ನಡೆಯಲಿದ್ದು, 2 ಗಂಟೆಗೆ ತುಮಕೂರು ಬಸ್ ನಿಲ್ದಾಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಜ್ಞಾನಪ್ರಕಾಶ ಸ್ವಾಮೀಜಿ ಅವರು ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವಹಿಸಲಿದ್ದಾರೆ. ಶಾಸಕ ಜ್ಯೋತಿ ಗಣೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಚಲನ ಚಿತ್ರ ನಟ ಚೇತನ್ ಅಹಿಂಸಾ ಅವರು ಭಾಗವಹಿಸಲಿದ್ದಾರೆ. ಉಳಿದಂತೆ ಹಲವು ಸಂಘಟನೆಗಳ ಮುಖಂಡರು, ಚಿಂತಕರು, ಅಂಬೇಡ್ಕರ್ ವಾದಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz