ತುಮಕೂರು : ತುಮಕೂರಿನಲ್ಲಿ ಮತ್ತೊಂದು ಖಾಸಗಿ ಬಸ್ ಅಪಘಾತವಾಗಿದ್ದು, ಟ್ಯಾಂಕರ್ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 5ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಇಂದು ಬೆಳಗಿನ ಜಾವ 3:50ರ ಸುಮಾರಿಗೆ ತುಮಕೂರು ಹೊರವಲಯದ ಅಂತರಸನಹಳ್ಳಿ ರಾಷ್ಟ್ರೀಯ ಹೆದ್ದಾರಿ 48ರ ಬಳಿಯ ರಂಗಪುರಬಳಿ ಘಟನೆ ಸಂಭವಿಸಿದೆ. ಹಿಂಬದಿಯಿಂದ ಬಂದು ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 5ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಖಾಸಗಿ ಬಸ್ ಸೊರಬದಿಂದ ಬೆಂಗಳೂರು ಕಡೆ ತೆರಳುತ್ತಿತ್ತು. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ವರದಿ: ಎ.ಎನ್. ಪೀರ್ , ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5