ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ದಸರಾ ಮಹೋತ್ಸವ–2026ರ ಅಂಗವಾಗಿ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಕಂದಾಯ, ಯುವಜನ ಮತ್ತು ಸಬಲೀಕರಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ ಪರಮೇಶ್ವರ ಹಾಗೂ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ಅವರು ದಸರಾ ಅಂಬಾರಿ ಬಸ್ ಗೆ ಚಾಲನೆ ನೀಡಿದರು.
ದಸರಾ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸುವುದು ಹಾಗೂ ಸಾರ್ವಜನಿಕರಿಗೆ ಹಬ್ಬದ ವಿಶೇಷ ಅನುಭವವನ್ನು ಒದಗಿಸುವ ಉದ್ದೇಶದಿಂದ ಈ ಅಂಬಾರಿ ಬಸ್ ಸೇವೆಯನ್ನು ಆರಂಭಿಸಲಾಗಿದೆ. ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ಈ ಬಸ್, ನಗರದ ಉತ್ಸವದ ಮೆರುಗನ್ನು ಹೆಚ್ಚಿಸುವುದರೊಂದಿಗೆ ಸಾರ್ವಜನಿಕರಲ್ಲಿ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಲಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜಾ ಬಿ.ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
