ತುಮಕೂರು: ದಸರಾ–2026ರ ಅಂಗವಾಗಿ ಅಕ್ಟೋಬರ್ 18ರಂದು ನಡೆಯಲಿರುವ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ಸಾರ್ವಜನಿಕರು ಉಚಿತವಾಗಿ ಭಾಗವಹಿಸಲು ಅನುಕೂಲವಾಗುವಂತೆ ರೂಪಿಸಿರುವ ನೋಂದಣಿ ವೆಬ್ ಸೈಟ್ ಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಚಾಲನೆ ನೀಡಿದರು.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಪಸ್ಥಿತರಿದ್ದು, ವೆಬ್ ಸೈಟ್ ನ ಉದ್ದೇಶ ಮತ್ತು ಕಾರ್ಯಕ್ರಮದ ಸಿದ್ಧತೆಗಳ ಕುರಿತು ಚರ್ಚಿಸಲಾಯಿತು.
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಪಂಜಿನ ಕವಾಯತು ಕಾರ್ಯಕ್ರಮವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಉಚಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಈ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರಾಗಿರುವವರು ಮುಂಚಿತವಾಗಿ ನೋಂದಾಯಿಸಿಕೊಳ್ಳಬಹುದು.
ಸಾರ್ವಜನಿಕರಿಗೆ ಸುಲಭವಾಗಿ ನೋಂದಣಿ ಮಾಡಿಕೊಳ್ಳಲು ಅನುಕೂಲವಾಗುವಂತೆ ವೆಬ್ ಸೈಟ್ ರೂಪಿಸಲಾಗಿದ್ದು, ಕಾರ್ಯಕ್ರಮದ ಆಯೋಜನೆಯನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಈ ಕ್ರಮ ಸಹಕಾರಿಯಾಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ.
ಸದರಿ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಇತರೆ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
