ತುಮಕೂರು: ಜಿಲ್ಲಾಡಳಿತದ ವತಿಯಿಂದ ತುಮಕೂರು ದಸರಾ ಉತ್ಸವದ ಪ್ರಯುಕ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅಕ್ಟೋಬರ್ 17 ರಿಂದ 21ರವರೆಗೆ ಆಹಾರ ಮೇಳವನ್ನು ಆಯೋಜಿಸಲಾಗಿದ್ದು, ಈ ಆಹಾರ ಮೇಳದಲ್ಲಿ ಮಳಿಗೆಯನ್ನು ತೆರೆಯಲಿಚ್ಛಿಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಜಂಟಿ ನಿರ್ದೇಶಕರು ಮತ್ತು ಸದಸ್ಯ ಕಾರ್ಯದರ್ಶಿ, ಆಹಾರ ಮೇಳ ಉಪ ಸಮಿತಿ, ತುಮಕೂರು ದಸರಾ ಮಹೋತ್ಸವ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಇವರ ಕಾರ್ಯಾಲಯ, ಕೊ. ಸಂಖ್ಯೆ: 205, 2ನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ, ತುಮಕೂರು ಇವರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 5ರೊಳಗೆ ಸಲ್ಲಿಸತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಇ–ಮೇಲ್ ddfood–tumkur@gmail.com ಅಥವಾ ddfcs.tmkr–ka@nic.in ಅಥವಾ ದೂ.ವಾ.0816–2278348ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
