nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026
    Facebook Twitter Instagram
    ಟ್ರೆಂಡಿಂಗ್
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    • ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ
    • ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ
    • ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ
    • ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೂನ್ 25ರಂದು ತುಮಕೂರು ಜಿಲ್ಲೆ ಬಂದ್‌ ಗೆ ಕರೆ: ಹೇಮಾವತಿ ಎಕ್ಸ್‌’ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಹೋರಾಟ
    ತುಮಕೂರು June 22, 2024

    ಜೂನ್ 25ರಂದು ತುಮಕೂರು ಜಿಲ್ಲೆ ಬಂದ್‌ ಗೆ ಕರೆ: ಹೇಮಾವತಿ ಎಕ್ಸ್‌’ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಹೋರಾಟ

    By adminJune 22, 2024No Comments2 Mins Read
    tumakuru bandh

    ತುಮಕೂರು: ಹೇಮಾವತಿ ಎಕ್ಸ್‌’ಪ್ರೆಸ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿ ತುಮಕೂರು,  ಜೂನ್ 25ರಂದು ತುಮಕೂರು ಬಂದ್ ಗೆ ಕರೆ ನೀಡಿದ್ದು, ಎಲ್ಲ ತಾಲೂಕು ಕೇಂದ್ರಗಳಲ್ಲಿ ಬಂದ್ ಆಚರಿಸಿ ಪ್ರತಿಭಟನೆ ಮಾಡಲಾಗುವುದು ನಡೆಸಲಾಗುವುದು ಎಂದು ತಿಳಿಸಿದೆ.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ಮಾಜಿ ಸಚಿವ ಸೊಗಡು ಶಿವಣ್ಣ, ಗುಬ್ಬಿ ತಾಲೂಕನ್ನು ಸುತ್ತುವರಿದಂತೆ ಬಂದಿರುವ 100 ಕಿ.ಮೀ. ಚಾನಲ್ ಸುತ್ತಳತೆ ಹೊರತುಪಡಿಸಿ ಡಿ.ರಾಂಪುರದಿಂದ 34.5 ಕಿ.ಮೀ. ಲಿಂಕ್ ಕೆನಾಲ್ ಪೈಪ್‌ಲೈನ್ ಮೂಲಕ ರಾಮನಗರ ಜಿಲ್ಲೆ ಮಾಗಡಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗಲು ಸುಮಾರು 1 ಸಾವಿರ ಕೋಟಿ ರೂಪಾಯಿ ಅಂದಾಜು ಮೊತ್ತದ ಕಾಮಗಾರಿಗೆ ಅನುಮೋದನೆ ಪಡೆದುಕೊಂಡು ಕಾಮಗಾರಿಯನ್ನು ಆರಂಭಿಸಿದ್ದಾರೆ. ಈ ಯೋಜನೆ ಅನುಷ್ಠಾನವಾದರೆ ನಮ್ಮ ಜಿಲ್ಲೆಯ ತಿಪಟೂರು, ಗುಬ್ಬಿ, ತುರುವೇಕೆರೆ, ಶಿರಾ, ಮಧುಗಿರಿ, ಕೊರಟಗೆರೆ, ಚಿಕ್ಕನಾಯಕನಹಳ್ಳಿ, ಸಿ.ಎಸ್‌.ಪುರ, ಸಂಪಿಗೆ, ಬುಗುಡನಹಳ್ಳಿ, ತುಮಕೂರು ನಗರ, ತುಮಕೂರು ಗ್ರಾಮಾಂತರ, ಹೊನ್ನುಡಿಕೆ, ನಾಗವಲ್ಲಿ, ತುಮಕೂರು ಅಮಾನಿಕೆರೆ, ಹೆಣ್ಣೂರು — ಗೂಳೂರು ಏತ ನೀರಾವರಿ ಯೋಜನೆಯ 52 ಕೆರೆಗಳು ಹಾಗೂ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕೆರೆಗಳು ಸೇರಿದಂತೆ ಕೃಷಿ ಚಟುವಟಿಕೆ ಅವಲಂಬಿಸಿರುವ ಜಿಲ್ಲೆಯ ಯಾವುದೇ ಕೆರೆಗೆ ನೀರು ಹರಿಯುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.


    Provided by
    Provided by

    ಈ ಯೋಜನೆಯಿಂದ ಮುಂದಿನ ಪೀಳಿಗೆಯ ಜನ ಜಾನುವಾರುಗಳಿಗೆ ಪ್ರಾಣಿ ಪಕ್ಷಿಗಳಿಗೆ ಕುಡಿಯಲು ಸಹ ನೀರು ಸಿಗುವುದಿಲ್ಲ. ಜೊತೆಗೆ ನಮ್ಮ ಜಿಲ್ಲೆಯ ರೈತರು ಜಮೀನುಗಳನ್ನು ಮಾರಾಟ ಮಾಡಿಕೊಂಡು ವಲಸೆ ಹೋಗವಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಈ ಯೋಜನೆ ತುಮಕೂರು ಜಿಲ್ಲೆಗೆ ಮರಣ ಶಾಸನವಾಗಲಿದೆ.   ಆದ್ದರಿಂದ ನಾವು ಈಗಲೇ ಎಚ್ಚೆತ್ತುಕೊಂಡು ಹೋರಾಟ ಮಾಡಬೇಕಾದಂತಹ ಅನಿವಾರ್ಯ ಪರಿಸ್ಥಿತಿ ಬಂದೊದಗಿದೆ ಎಂದರು.

    ತುಮಕೂರು ಜಿಲ್ಲೆಯ ಎಲ್ಲಾ ಪೂಜ್ಯ ಮಠಾಧೀಶರುಗಳು, ಪೂಜ್ಯ ಮುಸ್ಲಿಂ ಧರ್ಮ ಗುರುಗಳು, ಪೂಜ್ಯ ಪಾದ್ರಿಗಳು, ನಾಗರೀಕರು, ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ರೈತಪರ ಸಂಘಟನೆಗಳು, ದಲಿತಪರ ಹೋರಾಟ ಸಂಘಟನೆಗಳು, ಚಿನ್ನ ಬೆಳ್ಳಿ ವ್ಯಾಪಾರಸ್ಥರ ಯೂನಿಯನ್, ಜಿಲ್ಲಾ ವಿಶ್ವಕರ್ಮ ವೇದಿಕೆ, ಜಿಲ್ಲಾ ಅರ್ಚಕರ ಸಂಘ, ಕನ್ನಡ ಪರ ಸಂಘಟನೆಗಳು, ವರ್ತಕರ ಸಂಘಗಳು, ಜಿಲ್ಲಾ ಬ್ರಾಹ್ಮಣ ವೇದಿಕೆ, ವಾಲ್ಮೀಕಿ ಯುವ ಸೇನೆ, ವಾಣಿಜ್ಯೋದ್ಯಮಿಗಳ ಅಸೋಸಿಯೇಷನ್‌ ಸ್ತ್ರೀಶಕ್ತಿ-ಮಹಿಳಾ ಸಂಘಟನೆಗಳು, ವಕೀಲರ ಸಂಘ, ಎಲ್ಲಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು, ಎಲ್ಲಾ ವಿಧವಾದ ವ್ಯಾಪಾರಸ್ಥರು, ಹೋಟೆಲ್ ಮಾಲೀಕರ ಸಂಘ, ವರ್ತಕರ ಸಂಘ ಎ.ಪಿ.ಎಂ.ಸಿ., ಲಾರಿ ಚಾಲಕರ ಅಸೋಸಿಯೇಷನ್ ಆಟೋ ಚಾಲಕರ ಯೂನಿಯನ್, ಖಾಸಗಿ ಬಸ್ ಮಾಲೀಕರ ಸಂಘ, ಬೀದಿ ಬದಿ ವ್ಯಾಪಾರಸ್ಥರುಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

    ತುಮಕೂರು ಜಿಲ್ಲೆಯ ಹಿತ ಕಾಪಾಡುವ ಎಲ್ಲರೂ ಕೂಡಾ ಜೂನ್ 25ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಮ್ಮ ಎಲ್ಲಾ ದೈನಿಂದಿನ ಚಟುವಟಿಕೆಗಳನ್ನು ನಿಲ್ಲಿಸುವುದರ ಮೂಲಕ ‘ತುಮಕೂರು ಜಿಲ್ಲಾ ಬಂದ್‌’ ಯಶಸ್ಸಿಗೆ ಸಹಕರಿಸಬೇಕೆಂದು  ಮನವಿ ಮಾಡಿದ್ದೇವೆ ಎಂದರು.

    ತುಮಕೂರು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳು, ಗ್ರಾಮ ಪಂಚಾಯ್ತಿ ಕೇಂದ್ರ ಸ್ಥಾನಗಳು, ವ್ಯಾಪಾರ ವಹಿವಾಟು ನಡೆಸುವ ಕೇಂದ್ರಗಳು, ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳು ಸಂಪೂರ್ಣವಾಗಿ ಬಂದ್ ಆಚರಿಸಿ ‘ಹೇಮಾವತಿ ಎಕ್ಸ್‌ಪ್ರೆಸ್ ಅಂಕ್ ಕೆನಾಲ್ ಕಾಮಗಾರಿಯನ್ನು ಹಿಂಪಡೆಯಲು ನಮ್ಮ ಪ್ರತಿಭಟನೆಯ ಕೂಗು ಸರ್ಕಾರಕ್ಕೆ ಮುಟ್ಟುವಂತೆ ನಮ್ಮ ಹೋರಾಟ ಶಾಂತಿಯುತವಾಗಿರಬೇಕು ಈ ನಿಟ್ಟಿನಲ್ಲಿ ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ವ್ಯವಹಾರ, ವಾಹನ ಸಂಚಾರ ಸೇರಿದಂತೆ ಎಲ್ಲವನ್ನೂ ಸ್ವಯಂ ಪ್ರೇರಿತರಾಗಿ ಮುಚ್ಚಿ ಬೆಂಬಲ ನೀಡುವಂತೆ ಕೋರಲಾಗಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ

    February 12, 2026

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳಿಸುತ್ತಿದ್ದಾರೆ ಎಂದು ಬಿಜೆಪಿ…

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026

    ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ

    February 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.