nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 30 ಸಾವಿರ ಫಲಾನುಭವಿಗಳ ಪೌತಿಖಾತೆ, ಹಕ್ಕು ಪತ್ರ ವಿತರಣೆ, ಪಿಂಚಣಿ ಸೌಲಭ್ಯ ವಿತರಿಸಲು ಕ್ರಮ: ಜಿಲ್ಲಾಧಿಕಾರಿ ಶುಭ ಕಲ್ಯಾಣ್  
    ತುಮಕೂರು November 12, 2024

    30 ಸಾವಿರ ಫಲಾನುಭವಿಗಳ ಪೌತಿಖಾತೆ, ಹಕ್ಕು ಪತ್ರ ವಿತರಣೆ, ಪಿಂಚಣಿ ಸೌಲಭ್ಯ ವಿತರಿಸಲು ಕ್ರಮ: ಜಿಲ್ಲಾಧಿಕಾರಿ ಶುಭ ಕಲ್ಯಾಣ್  

    By adminNovember 12, 2024No Comments2 Mins Read
    shubha kalyan

    ತುಮಕೂರು:  ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯಿಂದ ಸುಮಾರು 30,000 ಫಲಾನುಭವಿಗಳ ಪೌತಿಖಾತೆ, ಹಕ್ಕು ಪತ್ರ ವಿತರಣೆ, ಪಿಂಚಣಿ ಸೌಲಭ್ಯಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್  ತಿಳಿಸಿದರು.

    ಮುಖ್ಯಮಂತ್ರಿಗಳ ಭೇಟಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,  ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.40ಕ್ಕೂ ಹೆಚ್ಚು ಮಳೆಯಾಗಿದೆ. ಅಧಿಕ ಮಳೆಯಿಂದ 3 ಮಂದಿ ಮರಣ ಹೊಂದಿದ್ದು, ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಮರಣ ಹೊಂದಿರುವವರ ಕುಟುಂಬಕ್ಕೆ ಈಗಾಗಲೇ ತಲಾ 5ಲಕ್ಷ ರೂ.ಗಳ ಪರಿಹಾರ ನೀಡಲಾಗಿದೆ. ಪ್ರಾಣ ಹಾನಿಯಾದ ಜಾನುವಾರು ಮಾಲೀಕರಿಗೂ ಪರಿಹಾರ ಹಣ ವಿತರಿಸಲಾಗಿದ್ದು, ಯಾವುದೇ ಪರಿಹಾರ ಹಣ ಬಾಕಿ ಇರುವುದಿಲ್ಲವೆಂದು ತಿಳಿಸಿದರು.

    ಜಿಲ್ಲೆಯಲ್ಲಿ ಹಿಂಗಾರು ಮಳೆಯಿಂದ 200 ಹೆಕ್ಟೇರ್ ಪ್ರದೇಶದ 327 ರೈತರ ಬೆಳೆ ಹಾನಿಯಾಗಿದೆ. ಈಗಾಗಲೇ ಬೆಳೆ ಹಾನಿಗೊಳಗಾದ ರೈತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪರಿಹಾರಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್ ಮಾಹಿತಿ ನೀಡಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಜಿಲ್ಲೆಯ 1.30ಲಕ್ಷ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಸವಲತ್ತುಗಳ ವಿತರಣೆ ಮಾಡಲು ಯೋಜಿಸಲಾಗಿದೆಯಲ್ಲದೆ, ಸುಮಾರು 2000 ಕೋಟಿ ರೂ. ವೆಚ್ಚದಲ್ಲಿ ಸವಲತ್ತುಗಳ ವಿತರಣೆ, ಉದ್ಘಾಟನೆಗೆ ಸಿದ್ಧವಿರುವ ಕಾಮಗಾರಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಮಾಹಿತಿ ನೀಡಿದರು.

    ಕೃಷಿ ಇಲಾಖೆಯ 100 ಕೋಟಿ, ತೋಟಗಾರಿಕೆ–55 ಕೋಟಿ, ಮಹಿಳಾ ಸ್ವಸಹಾಯ ಸಂಘಗಳ-40 ಕೋಟಿ, ಜಲ್ ಜೀವನ್ ಮಿಷನ್–202 ಕೋಟಿ, ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗದ 250 ಕೋಟಿ, ನಗರಾಭಿವೃದ್ಧಿಗಾಗಿ ಅಮೃತ್ ಯೋಜನೆಯಡಿ 250 ಕೋಟಿ, ಲೋಕೋಪಯೋಗಿ ಇಲಾಖೆ 238 ಕೋಟಿ, ಸಮಾಜ ಕಲ್ಯಾಣ ಇಲಾಖೆ 35 ಕೋಟಿ ಸೇರಿ ವಿವಿಧ ಇಲಾಖೆಗಳ ಸುಮಾರು 40 ಕೋಟಿ ರೂ. ಸೇರಿ ಒಟ್ಟು 2000 ಕೋಟಿ ರೂ.ಗಳ ಸವಲತ್ತು ವಿತರಣೆ, ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆ ಜಿಲ್ಲೆ ಸಿದ್ಧವಾಗಿದೆ ಎಂದು ತಿಳಿಸಿದರು.

    ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ರಾಜಣ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ, ಸಪ್ತಶ್ರೀ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಔರಾದ್ (ಬೀದರ್): ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಯಾಗಿರುವ ‘ವಿಬಿ–ಜಿ ರಾಮ್…

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.