ತುಮಕೂರು: ಜಿಲ್ಲೆಯಲ್ಲಿ ಸ್ವಂತ ಉದ್ಯಮ ಆರಂಭಿಸಲು ಉತ್ಸುಕರಾಗಿರುವ ನಿರುದ್ಯೋಗಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗಾಗಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ವಿಶೇಷ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಈ ತರಬೇತಿಯಲ್ಲಿ ಪಾಲ್ಗೊಳ್ಳಲು ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಅಕ್ಟೋಬರ್ 12 ರಿಂದ ಹತ್ತು ದಿನಗಳ ಕಾಲ ಈ ತರಬೇತಿ ನಡೆಯಲಿದೆ. ಸ್ವಂತ ಉದ್ಯಮ ಸ್ಥಾಪಿಸಿ ಸ್ವಾವಲಂಬನೆ ಸಾಧಿಸಲು ಬಯಸುವ ನಿರುದ್ಯೋಗಿಗಳು ಈ ತರಬೇತಿಯ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 7ರೊಳಗೆ ಉಪ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ರಿಸರ್ವ್ ಪೊಲೀಸ್ ಮೈದಾನದ ಎದುರು, ಎಸ್.ಐ.ಟಿ. ಬಸ್ ನಿಲ್ದಾಣ, ತುಮಕೂರು ಇಲ್ಲಿಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 9448812974 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
