ತುಮಕೂರು: ದ್ವಿಚಕ್ರವಾಹನಕ್ಕೆ ಅಡ್ಡ ಬಂದ ಯುವತಿಗೆ ನಿಂದನೆ ಮಾಡಿದ ವ್ಯಕ್ತಿಯೊಬ್ಬರ ಯುವತಿ ಪರ ಮಾತನಾಡಿದ ವ್ಯಕ್ತಿಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತುಮಕೂರು ನಗರದ ಮರಳೂರು ದಿಣ್ಣೆಯಲ್ಲಿ ನಡೆದಿದೆ.
ಇರ್ಫಾನ್ ಮಚ್ಚಿನಿಂದ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ವಿಲೀಂಗ್ ಮಾಡುತ್ತಿದ್ದ ಇರ್ಫಾನ್ ನ ಬೈಕ್ ಗೆ ಯುವತಿ ಅಡ್ಡ ಬಂದಿದ್ದಳು. ಈ ವೇಳೆ ಯುವತಿಯನ್ನು ಕೆಳಗೆ ತಳ್ಳಿದ ಇರ್ಫಾನ್, ಚುಡಾಯಿಸಿ ಜಗಳ ಆರಂಭಿಸಿದ್ದನಂತೆ.
ಈ ವೇಳೆ ಇರ್ಫಾನ್ ಹೆಸರಿನ ಇನ್ನೊಬ್ಬ ಯುವಕ ಮತ್ತು ಸಾಧಿಕ್ ಎಂಬವರು ಆರೋಪಿ ಇರ್ಫಾನ್ ಗೆ ಬೈದು, ಬುದ್ಧಿ ಹೇಳಿ ಯುವತಿಯನ್ನು ರಕ್ಷಿಸಿದ್ದರು. ಇದರಿಂದ ಕೋಪಗೊಂಡ ಆರೋಪಿ ಇರ್ಫಾನ್ ತನ್ನ ಸ್ನೇಹಿತರೊಂದಿಗೆ ಬಂದು ಇರ್ಫಾನ್ ಹಾಗೂ ಸಾಧಿಕ್ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದು, ಕೈಗೆ ತಲೆಗೆ ಲಾಂಗ್ ನಿಂದ ಹಲ್ಲೆ ನಡೆಸಿದ್ದಾನೆ.
ಹಲ್ಲೆಯ ಪರಿಣಾಮ ಯುವತಿಯ ರಕ್ಷಣೆಗೆ ಬಂದಿದ್ದ ಇರ್ಫಾನ್ (30)ನ ಸ್ಥಿತಿ ಗಂಭೀರವಾಗಿದೆ. ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಲ್ಲೆಯ ಬಳಿಕ ಆರೋಪಿ ಇರ್ಫಾನ್ ಹಾಗೂ ಆತನ ಸ್ನೇಹಿತರು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸ್ತಾ ಇದ್ದಾರೆ.
ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪುಂಡರ ಪುಂಡರ ಹಾವಳಿ ಮಿತಿ ಮೀರುತ್ತಿದೆ. ಪೊಲೀಸರು ಪುಂಡರ ವಿರುದ್ಧ ಕ್ರಮಕೈಗೊಳ್ಳಲು ವಿಫಲವಾಗ್ತಾ ಇದ್ದಾರೆ ಎನ್ನುವ ಮಾತುಗಳು ಘಟನೆಯ ಬೆನ್ನಲ್ಲೇ ಕೇಳಿ ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q