ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗಾಗಿ ಜನವರಿ 9ರಂದು ತುಮಕೂರು ವಿಶ್ವವಿದ್ಯಾನಿಲಯದ ಸದಾನಂದಮಯ್ಯ ಬ್ಲಾಕ್‌ನಲ್ಲಿ ‘ಬೃಹತ್ ಉದ್ಯೋಗ ಮೇಳ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಉದ್ಯೋಗ ಮೇಳದಲ್ಲಿ ತುಮಕೂರಿನ ವಸಂತ ನರಸಾಪುರ ಕೈಗಾರಿಕಾ ಪ್ರದೇಶ, ಅಂತರಸನಹಳ್ಳಿ ಕೈಗಾರಿಕಾ ಪ್ರದೇಶ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರಿನ ಹೊರವಲಯದ ದಾಬಸ್ ಪೇಟೆ ಕೈಗಾರಿಕಾ ಪ್ರದೇಶ ಮತ್ತು ಬೆಂಗಳೂರಿನ ಸುಮಾರು 60ಕ್ಕೂ ಹೆಚ್ಚಿನ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಸುಮಾರು 2000ಕ್ಕೂ ಅಧಿಕ ಉದ್ಯೋಗವಕಾಶಗಳು ಲಭ್ಯವಿರುತ್ತವೆ.
ಸದರಿ ಉದ್ಯೋಗ ಮೇಳದಲ್ಲಿ ಜಿಲ್ಲೆಯ ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಯಾವುದೇ ಪದವಿ, ಐಟಿಐ ಮತ್ತು ಡಿಪ್ಲೊಮೋ ಪಾಸಾದ, 18 ರಿಂದ 40 ವರ್ಷದೊಳಗಿನ ಪುರುಷ/ ಮಹಿಳಾ/ಅಂಗವಿಕಲ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಉದ್ಯೋಗಮೇಳದ ಪ್ರಯೋಜನವನ್ನು ಪಡೆಯಬೇಕೆಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx