nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ

    July 3, 2025

    ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ: ಸಂಸದ ಯದುವೀರ್ ಒಡೆಯರ್

    July 3, 2025
    Facebook Twitter Instagram
    ಟ್ರೆಂಡಿಂಗ್
    • ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ
    • ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ
    • ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ: ಸಂಸದ ಯದುವೀರ್ ಒಡೆಯರ್
    • ಒಳ ಮೀಸಲಾತಿ ಜಾರಿಗೊಳಿಸದೆ ಇರುವ ಹುನ್ನಾರ: ಆ.1ರಿಂದ ಹೋರಾಟ: ಗೋವಿಂದ ಕಾರಜೋಳ
    • ಡಿ.ಕೆ.ಶಿವಕುಮಾರ್‌ ಸಿಎಂ ಆಗಬೇಕು ಎಂಬ ಆಸೆ ನನಗೂ ಇದೆ: ಡಿ.ಕೆ.ಸುರೇಶ್‌
    • ಅಕ್ರಮ ಪಡಿತರ ಅಕ್ಕಿ ಸಾಗಾಟ: ಕಮಲನಗರ ಪೊಲೀಸರಿಂದ ದಾಳಿ
    • ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ
    • ಕಾಂಗ್ರೆಸ್ ಸರ್ಕಾರದಿಂದ ಪೊಲೀಸ್ ಇಲಾಖೆಯ ಮನೋಬಲಕ್ಕೆ ಧಕ್ಕೆ!: ಆರ್.ಅಶೋಕ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ರಸ್ತೆ ಮೇಲ್ಸೇತುವೆ ಕಾಮಗಾರಿ ಮುಗಿಯೋದು ಯಾವಾಗ..?
    ತುಮಕೂರು February 5, 2022

    ತುಮಕೂರು ರಸ್ತೆ ಮೇಲ್ಸೇತುವೆ ಕಾಮಗಾರಿ ಮುಗಿಯೋದು ಯಾವಾಗ..?

    By adminFebruary 5, 2022No Comments2 Mins Read
    tumakuru

    ರಾಷ್ಟ್ರೀಯ ಹೆದ್ದಾರಿ 4ರ ತುಮಕೂರು ರಸ್ತೆಯಲ್ಲಿ ನಡೆಯುತ್ತಿರುವ ಮೇಲ್ಸೇತುವೆ ದುರಸ್ತಿ ಕಾಮಗಾರಿ ಯಾವಾಗ ಮುಗಿಯುತ್ತದೆ ಎಂಬುದು ಯಕ್ಷಪಶ್ನೆಯಾಗಿ ಉಳಿದಿದೆ. ತಾಂತ್ರಿಕ ದೋಷ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಕಳೆದ ಡಿ.25ರಂದು ಏಕಾಏಕಿ ಮೇಲ್ಸೇತುವೆ ಮೇಲೆ ವಾಹನ ಸಂಚಾರವನ್ನು ಬಂದ್ ಮಾಡಲಾಗಿತ್ತು. ಜ.14ರೊಳಗೆ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿತ್ತು. ಆದರೆ ಅದು ಇನ್ನು ಮುಗಿಯುವುದು ಯಾವಾಗ ಎಂಬುದನ್ನು ತಿಳಿಸಲು ಅಧಿಕಾರಿಗಳು ವಿಫಲರಾಗಿದ್ದಾರೆ.

    ಪಿಲ್ಲರ್ ಸಂಖ್ಯೆ 102, 103 ಸೇರಿದಂತೆ ವಿವಿಧ ಪಿಲ್ಲರ್ಗಳ ಗುಣಮಟ್ಟದ ಬಗ್ಗೆ ಈಗಾಗಲೇ ದೆಹಲಿಯಿಂದ ಬಂದಿದ್ದ ಇಂಜಿನಿಯರ್ಗಳು ತಪಾಸಣೆ ಮಾಡಿ ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ. ಪಿಲ್ಲರ್ಗಳಿಗೆ ಒತ್ತಡ ತಡೆಯಲು ಅಳವಡಿಸಲಾಗಿರುವ ಸಾಧನ ಹಾಳಾಗಿರುವುದರಿಂದ ಅದನ್ನು ದುರಸ್ತಿ ಮಾಡುವುದೇ ಒಂದು ಸವಾಲಿನ ಕೆಲಸವಾಗಿದೆ ಎಂದು ಹೇಳಲಾಗುತ್ತಿದೆ.ಇದು ಗಂಭೀರ ಸಮಸ್ಯೆ ಎಂಬುದರ ಬಗ್ಗೆ ತಿಳಿಸಲೂ ಕೂಡ ಹೆದ್ದಾರಿ ಪ್ರಾಧಿಕಾರದವರು ಯಾವುದೇ ಮಾಹಿತಿಯನ್ನು ಮಾಧ್ಯಮಗಳಿಗಾಗಲಿ, ಸ್ಥಳೀಯರಿಗಾಗಲಿ ತಿಳಿಸುತ್ತಿಲ್ಲ. ತಮ್ಮ ಪಾಡಿಗೆ ತಾವು ಕೆಲವೇ ಕಾರ್ಮಿಕರೊಂದಿಗೆ ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ.ಸ್ಥಳೀಯರು ಹೇಳುವ ಪ್ರಕಾರ ಇನ್ನು 15 ದಿನ ಕಾಮಗಾರಿ ನಡೆಯಲಿದ್ದು, ನಂತರ ಮೇಲ್ಸೇತುವೆ ಮೇಲೆ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಕುರಿತಂತೆ ಚರ್ಚಿಸಿ ಪ್ರಾಯೋಗಿಕವಾಗಿ ವಾಹನಗಳ ಸಂಚಾರಕ್ಕೆ ಅವಕಾಶ ಕೊಟ್ಟು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗುತ್ತಿದೆ.


    Provided by

    ಹೈರಾಣಾಗುತ್ತಿರುವ ಸವಾರರು: ಮೇಲ್ಸೇತುವೆ ಯಾವಾಗ ಸಿದ್ದವಾಗುತ್ತದೋ ಎಂದು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಂಟೆಗಟ್ಟಲೇ ನಿಂತು ಚಲಿಸಬೇಕಾಗಿರುವ ಪರಿಸ್ಥಿತಿ ಇದೆ. ಈ ಬಗ್ಗೆ ಅಧಿಕಾರಿಗಳು ಬೇಜವಾಬ್ದಾರಿ ತೋರುತ್ತಿದ್ದಾರೆ. ಮಾಹಿತಿ ಪಡೆಯಲು ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಜಾನ್ಬಾಜ್ಗೆ ಕರೆ ಮಾಡಿದರೂ ಪ್ರಯೋಜನವಾಗಲಿಲ್ಲ, ವ್ಯವಸ್ಥಾಪಕಿ ವಾಣಿಶ್ರೀ ಕರೆ ಸ್ವೀಕರಿಸಿಯೂ ಪ್ರತಿಕ್ರಿಯೆ ನೀಡುವುದಿಲ್ಲ.

    ಸರ್ವಿಸ್ ರಸ್ತೆಗಳಲ್ಲಿ ವಾಹನ ದಟ್ಟಣೆ ವಿಪರೀತವಾಗಿದ್ದು, ವಾಹನ ದಟ್ಟಣೆ ನಿರ್ವಹಿಸಲು ಸಂಚಾರಿ ಪೊಲೀಸರು ಹರಸಾಹಸಪಡುವಂತಾಗಿದೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮೇಲ್ಸೇತುವೆಯಲ್ಲಿ ಸಂಚಾರವನ್ನು ಪ್ರಾರಂಭಿಸುವ ಸಂಬಂಧ ಯಾವುದೇ ಸ್ಪಷ್ಟ ಮಾಹಿತಿ ನೀಡುತ್ತಿಲ್ಲ ಎಂದು ಪೀಣ್ಯ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶ್ರೀಧರ್ ಮಾಹಿತಿ ನೀಡಿದ್ದಾರೆ.ಪ್ರತಿನಿತ್ಯ ಲಕ್ಷ ವಾಹನಗಳು ಸಂಚರಿಸುವ ನಗರದ ಹೆಬ್ಬಾಗಿಲಾಗಿರುವ ಮೇಲ್ಸೇತುವೆಯ ಬಂದ್ ನಿಂದಾಗಿ ತುಮಕೂರು ರಸ್ತೆಯಲ್ಲಿ ವಾಹನ ದಟ್ಟಣೆ ಮಿತಿಮೀರಿದೆ ಹತ್ತು ನಿಮಿಷದಲ್ಲಿ ಕ್ರಮಿಸಬಹುದಾದ ದೂರಕ್ಕೆ ಗಂಟೆಗಟ್ಟಲೆ ಕಾಯುವಂತಾಗಿದ್ದು ಜನತೆ ಸರ್ಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.

    ಪೀಕ್ ಅವರ್ ಹಾಗೂ ರಜಾದಿನಗಳಲ್ಲಿ ತುಮಕೂರು ರಸ್ತೆಯಲ್ಲಿ ಸಂಚರಿಸಿದರೆ ನರಕ ದರ್ಶನವಾಗುತ್ತದೆ ಎಂದು ವಾಹನ ಸವಾರ ನರಸಿಂಹಮೂರ್ತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಲಕ್ಷಾಂತರ ವಾಹನಗಳು ಸಂಚರಿಸುವ ಮೇಲ್ಸೇತುವೆಯ ದುರಸ್ತಿ ಕಾರ್ಯವನ್ನು ಸಕಾಲದಲ್ಲಿ ಮುಗಿಸದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ ಎಂದು ಶಾಸಕ ಆರ್. ಮಂಜುನಾಥ್ ಕಿಡಿಕಾರಿದರು.

    ವಾಹನ ಸವಾರರ ಆಕ್ರೋಶ: ಖಾಸಗಿ ಸಂಸ್ಥೆ ಟೋಲ್ ಹೆಸರಿನಲ್ಲಿ ಜನರನ್ನು ಸುಲಿಗೆ ಮಾಡುತ್ತಿದ್ದರೂ ಸಮರ್ಪಕ ಸೇವೆ ನೀಡುತ್ತಿಲ್ಲ ಎಂದು ಕಾರು ಚಾಲಕ ನವೀನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಂಟೆಗಟ್ಟಲೆ ಸಂಚಾರ ದಟ್ಟಣೆಯಲ್ಲಿ ಸಿಲುಕುವುದರಿಂದ ಹೆಚ್ಚಿನ ಟ್ರಿಪ್ಗಳನ್ನು ಮಾಡಲಾಗುತ್ತಿಲ್ಲ ಇದರಿಂದ ತುಂಬಾ ತೊಂದರೆಯಾಗುತ್ತಿದೆ ಎಂದು ಮತ್ತೋರ್ವ ಚಾಲಕ ಮನೋಜ್ ಅಳಲು ತೋಡಿಕೊಂಡರು.

    ನೈಸ್ ರಸ್ತೆಯಲ್ಲಿ ಸಾಗುವಂತೆ ಪೊಲೀಸರು ವಾಹನ ಸವಾರರಿಗೆ ಮನವರಿಕೆ ಮಾಡಿಕೊಡುತ್ತಿದ್ದಾರೆ. ನಿಧಾನವಾಗುವ ಹಾಗೂ ಶುಲ್ಕ ಕಟ್ಟಬೇಕಾಗಿರುವುದರಿಂದ ವಾಹನ ಸವಾರರು ರಸ್ತೆ ಬಳಸುತ್ತಿಲ್ಲ. ಇದರಿಂದ ಕಣ್ಣು ಹಾಯಿಸಿದಷ್ಟು ದೂರ ತುಮಕೂರು ರಸ್ತೆಯಲ್ಲಿ ವಾಹನಗಳ ಸಾಲೇ ಬೆಳೆದಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಹೃದಯ ವಿದ್ರಾವಕ ಘಟನೆ: ಒಂಟಿ ಜೀವನದಿಂದ ಬೇಸತ್ತು ತಾಯಿ ಮಗಳಿಂದ ದುಡುಕಿನ ನಿರ್ಧಾರ!

    July 3, 2025

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025
    Our Picks

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025

    ಹೃದಯಾಘಾತದ ಸಾವು ಕೊರೋನಾ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    July 2, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಅಕ್ರಾ:  ಪ್ರಧಾನಿ ನರೇಂದ್ರ ಮೋದಿ ಅವರಿಗೆ “ವಿಶಿಷ್ಟ ರಾಜನೀತಿ ಮತ್ತು ಪ್ರಭಾವಶಾಲಿ ಜಾಗತಿಕ ನಾಯಕತ್ವ” ಕ್ಕಾಗಿ ದೇಶದ ರಾಷ್ಟ್ರೀಯ ಗೌರವವಾದ…

    ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ

    July 3, 2025

    ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ: ಸಂಸದ ಯದುವೀರ್ ಒಡೆಯರ್

    July 3, 2025

    ಒಳ ಮೀಸಲಾತಿ ಜಾರಿಗೊಳಿಸದೆ ಇರುವ ಹುನ್ನಾರ: ಆ.1ರಿಂದ ಹೋರಾಟ: ಗೋವಿಂದ ಕಾರಜೋಳ

    July 3, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.