ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 31, 32 ಹಾಗೂ 35ಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸಲು ಡಿಸೆಂಬರ್ 20ರಂದು ಸಂಜೆ 4 ಗಂಟೆಗೆ ಸಿದ್ಧರಾಮೇಶ್ವರ ಬಡಾವಣೆಯ ಶಿವ ಸುಬ್ರಮಣ್ಯ ಪಾರ್ಕ್ ನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx