ತುಮಕೂರು: ಎರಡು ಬಾರಿ ಕಾಂಗ್ರೆಸ್ ಶಾಸಕರಾಗಿದ್ದ ಹಾಗೂ ಉತ್ತಮ ವಿದ್ಯಾರ್ಹತೆ ಹೊಂದಿರುವ ಹಾಗೂ ಒಮ್ಮೆ ತುಮಕೂರು ನಗರ ವಿಧಾನಸಭೆ ಕ್ಷೇತ್ರದ ಶಾಸಕರಾಗಿರುವ ತಮ್ಮ ಅಳಿಯ ರಫೀಕ್ ಅಹಮದ್ ಗೆ ಟಿಕೆಟ್ ನೀಡುವಂತೆ ಶಿಫಾರಸು ಮಾಡಿದ್ದರೂ ಸಹ ಮಾಜಿ ಉಪ ಮುಖ್ಯಮಂತ್ರಿ ಹಿರಿಯ ಕಾಂಗ್ರೆಸ್ ಮುಖಂಡರು ಟಿಕೆಟ್ ನೀಡದೇ ವಂಚನೆ ಮಾಡಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಶಫಿ ಅಹಮದ್ ಆರೋಪಿಸಿದ್ದಾರೆ.
ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದರಿಂದ ಮನನೊಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಚುನಾವಣೆಯನ್ನು ಎದುರಿಸಲು ಶಕ್ತಿ ಇಲ್ಲದಂತಹ ವ್ಯಕ್ತಿಯಾಗಿರುವ ಇಕ್ಬಾಲ್ ಅಹಮದ್ ಎಂಬವರಿಗೆ ಟಿಕೆಟ್ ನೀಡಿದ್ದು, ಈ ಹಿಂದೆ ಅನೇಕ ಬಾರಿ ಡಾ.ಜಿ.ಪರಮೇಶ್ವರ್ ಅವರ ಗಮನಕ್ಕೆ ತಂದಿದ್ದ ವೇಳೆ ಟಿಕೆಟ್ ನೀಡುವ ಸಂಬಂಧ ಸಾಕಷ್ಟು ಭರವಸೆ ನೀಡಿದ್ದ ಅವರು ಟಿಕೆಟ್ ಸಿಗದಂತೆ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಿಗೂ ಕೂಡ ಈ ಕುರಿತಂತೆ ಮನವಿ ಮಾಡಲಾಗಿತ್ತು. ಆದರೆ ಹಿರಿಯ ಕಾಂಗ್ರೆಸ್ಸಿಗ ಮಾತಿಗೆ ಮನ್ನಣೆ ನೀಡಿಲ್ಲ. ಅಲ್ಲದೆ ತುಮಕೂರು ನಗರದಲ್ಲಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮುಸ್ಲಿಂ ಸಮುದಾಯದ ಮತದಾರರು ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ರೀತಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷದಿಂದ ಈ ಬಾರಿ ಸಾಕಷ್ಟು ಅನ್ಯಾಯ ಮಾಡಲಾಗಿದೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy