ತಿಪಟೂರು: ತಾಲೂಕು ಹಾಲು ಉತ್ಪಾದಕರ ಸಂಘಗಳ ಸಂಖ್ಯೆ 145 ಏರಿಕೆಯಾಗಿದ್ದು ಪ್ರತಿನಿತ್ಯ 1.30 ಲಕ್ಷ ಲೀಟರ್ ಹಾಲು ತುಮಕೂರಿಗೆ ಸರಬರಾಜು ಆಗುತ್ತಿದೆ ಒಕ್ಕೂಟದಿಂದ ನಿತ್ಯ 1.30 ಲಕ್ಷ ಲೀಟರ್ ಮುಂಬೈಗೆ ರವಾನೆಯಾಗುತ್ತಿದೆ ಎಂದು ಕೆಎಂಎಫ್ ಹಾಗೂ ತುಮುಲ ನಿರ್ದೇಶಕ ಎಂ.ಪಿ. ಪ್ರಕಾಶ್ ತಿಳಿಸಿದರು.
ಜಿಲ್ಲಾ ಒಕ್ಕೂಟಕ್ಕೆ ಐದು ಕೋಟಿ ರೂಪಾಯಿ ಲಾಭ ಬಂದಿದೆ. ನಂತರ ಪ್ರತಿ ಲೀಟರ್ ಗೆ ರೈತರಿಗೆ 2.5 ರೂ. ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಕೊರೊನಾದಿಂದ ಮೃತಪಟ್ಟ ರೈತರಿಗೆ 1 ಲಕ್ಷ ರೂ. ಪರಿಹಾರವನ್ನು ನೀಡಲಾಗಿದೆ ಎಂದು ಅವರು ಹೇಳಿದರು.
ಇನ್ನೂ ಹೊನ್ನವಳ್ಳಿ ತುಮುಲ್ ಕಲ್ಯಾಣ ಟ್ರಸ್ಟ್ ವತಿಯಿಂದ ತಿಪಟೂರು ತಾಲೂಕು ಹಾಲು ಉತ್ಪಾದಕ ಸಂಘಗಳ ರೈತರಿಗೆ ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯ ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಮಾರ್ಚ್ 31ರಂದು ಬೃಹತ್ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಇದೇ ವೇಳೆ ಅವರು ಇದೇ ವೇಳೆ ತಿಳಿಸಿದರು.
ಆರೋಗ್ಯ ಶಿಬಿರವನ್ನು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆರೋಗ್ಯ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ತುಮುಲ ಅಧ್ಯಕ್ಷ ಎಂ.ಕೆ.ಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕ ಕೆ.ಷಡಕ್ಷರಿ ತುಮಲ್ ಅಧ್ಯಕ್ಷ ಮಹಾಲಿಂಗಯ್ಯ ಹಾಲು ಒಕ್ಕೂಟದ ಸದಸ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5