ತುಮಕೂರು: ಪ್ರಕರಣ ಒಂದಕ್ಕೆ ಸಂಬಂಧಪಟ್ಟಂತೆ ಸ್ಥಳಮಾಜರಿಗೆ ಕರೆದುಕೊಂಡು ಹೋಗಿದ್ದ ರೌಡಿಶೀಟರ್ ಪರಾರಿಯಾಗಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಆತನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.
ಪೊಲೀಸರಿಂದ ರೌಡಿ ಶೀಟರ್ ಮನು ಎಂಬಾತನ ಕಾಲಿಗೆ ಗುಂಡೇಟು ತಗುಲಿದೆ. ತುಮಕೂರು ನಗರದ ದಿಬ್ಬೂರು ಬಳಿ ಘಟನೆ ನಡೆದಿದ್ದು, ತುಮಕೂರು ನಗರ ಪೊಲೀಸ್ ಠಾಣೆ ಸಿಪಿಐ ದಿನೇಶ್ ರಿವಲ್ವಾರ್ನಿಂದ ರೌಡಿಶೀಟರ್ ಮನು ಕಾಲಿಗೆ ಗುಂಡು ಹೊಡೆದಿದ್ದಾರೆ.
ಈ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರಿಗೆ ಶರಣಾಗುವಂತೆ ಎರಡು ಬಾರಿ ಪೊಲೀಸ್ ಇನ್ಸ್ಪೆಕ್ಟರ್ ದಿನೇಶ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಪೊಲೀಸರಿಗೆ ಶರಣಾಗದೇ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಮನು ಯತ್ನಿಸಿದನು. ಈ ವೇಳೆ ಆತ್ಮರಕ್ಷಣೆಗಾಗಿ ರೌಡಿಶೀಟರ್ ಮನು ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದಾರೆ. ಗಾಯಾಳು ಪೊಲೀಸ್ ಸಿಬ್ಬಂದಿ ಹಾಗೂ ರೌಡಿಶೀಟರ್ ಮನುಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA